Wednesday, January 22, 2025
ಸುದ್ದಿ

ಬಸ್ ಮಾಲಕರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಶಾಸಕ ವೇದವ್ಯಾಸ್ ಕಾಮತ್- ಕಹಳೆ ನ್ಯೂಸ್

ಮಂಗಳೂರು: ಬಸ್ ಸಂಚಾರವಿಲ್ಲದ ಕೆಲವು ಭಾಗಗಳಿಗೆ ಬಸ್ ಸಂಚಾರ ಪ್ರಾರಂಭಿಸುವ ಕುರಿತು ಶಾಸಕ ವೇದವ್ಯಾಸ್ ಕಾಮತ್ ಅವರು ಬಸ್ ಮಾಲಕರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಬಳಿಕ ಮಾತನಾಡಿದ ಶಾಸಕರು ನಗರ ಪ್ರದೇಶದಿಂದ ವಿವಿಧ ಭಾಗಗಳಿಗೆ ಬಸ್ ಸಂಚಾರ ಪ್ರಾರಂಭಿಸು ವಿಚಾರವಾಗಿ ಸಾರ್ವಜನಿಕರೊಂದಿಗೆ ಹಾಗೂ ಬಸ್ ಮಾಲಕರ ಸಂಘದ ಪದಾದಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಮಂಗಳೂರು ನಗರ ದಕ್ಷಿಣದ ವಿವಿಧ ಕಡೆಗಳಲ್ಲಿ ಬಸ್ ಸಂಚಾರವಿಲ್ಲದೆ ಸಾರ್ವಜನಿಕರು ಸಂಕಷ್ಟ ಅನುಭವಿಸುತಿದ್ದಾರೆ. ಈ ನಿಟ್ಟಿನಲ್ಲಿ ಖಾಸಗಿ ಬಸ್ ಮಾಲಕರೊಂದಿಗೆ ಚರ್ಚಿಸಲಾಗಿದ್ದು ಬಸ್ ಪ್ರಾರಂಭಿಸಲು ಮನವಿ ಮಾಡಲಾಗಿದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ರೂಪಶ್ರೀ ಪೂಜಾರಿ, ಬಸ್ ಮಾಲಕರ ಸಂಘದ ಅದ್ಯಕ್ಷರಾದ ಜಯಶೀಲ ಅಡ್ಯಾಂತಾಯ, ಕಾರ್ಯದರ್ಶಿ ವಿ.ಕೆ ಪುತ್ರನ್, ಮುಖಂಡರಾದ ಪ್ರಕಾಶ್ ಶೇಖ, ರೋಷನ್, ಅಧಿಕಾರಿಗಳು, ಸ್ಥಳೀಯರು ಉಪಸ್ಥಿತರಿದ್ದರು