Sunday, January 19, 2025
ರಾಜ್ಯಸುದ್ದಿ

ಕಲ್ಪತರು ನಾಡಿನಲ್ಲಿ ಮತ್ತೆ ಕೋವಿಡ್-19 ಆತಂಕ ; ತುಮಕೂರಿನಲ್ಲಿ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢ – ಕಹಳೆ ನ್ಯೂಸ್

ತುಮಕೂರು: ಕಲ್ಪತರು ನಾಡಿನಲ್ಲಿ ಮತ್ತೆ ಕೋವಿಡ್-19 ಆತಂಕ ಮತ್ತೆ ಹೆಚ್ಚಿದೆ. ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಕೋವಿಡ್ ದೃಢ ಪಟ್ಟಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂಬಂಧ ತುಮಕೂರು ಜಿಲ್ಲಾಧಿಕಾರಿ ವೈ. ಎಸ್ ಪಾಟೀಲ್ ಹೇಳಿಕೆ ನೀಡಿದ್ದು, ತುಮಕೂರಿನ ಸಿದ್ದಗಂಗಾ ಹಾಗೂ ವಾದೀರಾಜ್ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಬಂದಿದೆ ಎಂದು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಒಟ್ಟು 15 ವಿದ್ಯಾರ್ಥಿಗಳಿಗೆ ಪಾಸಿಟಿವ್ ಕಾಣಿಸಿಕೊಂಡಿದೆ. ಇವರೆಲ್ಲರೂ ಕೇರಳದಿಂದ ಬಂದ ವಿದ್ಯಾರ್ಥಿಗಳು. ಎಲ್ಲರಿಗೂ ಕ್ವಾರಂಟೈನ್ ಮಾಡಲಾಗಿದೆ. 15 ವಿದ್ಯಾರ್ಥಿಗಳ ಸ್ವಾಬನ್ನು ಹೆಚ್ಚಿನ ಪರೀಕ್ಷೆಗಾಗಿ ಬೆಂಗಳೂರಿಗೆ ಕಳುಹಿಸಿಕೊಡಲಾಗಿದೆ ಎಂದರು.

18 ವರ್ಷ ಮತ್ತು ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ಕಡ್ಡಾಯಗೊಳಿಸಲಾಗಿದೆ. ಕನಿಷ್ಟ ಒಂದು ಡೋಸ್ ತೆಗೆದುಕೊಂಡ ವಿದ್ಯಾರ್ಥಿಗಳಿಗೆ ಮಾತ್ರ ತರಗತಿ ಅವಕಾಶ ನೀಡಲಾಗಿದ್ದು, ವ್ಯಾಕ್ಸಿನ್ ತೆಗೆದುಕೊಳ್ಳದ ವಿದ್ಯಾರ್ಥಿಗಳಿಗೆ ನಿರ್ಬಂಧ ಹೇರಲಾಗಿದೆ. ಈ ಕುರಿತು ಎಲ್ಲಾ ಕಾಲೇಜುಗಳಿಗೆ ಆದೇಶ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.