Sunday, January 19, 2025
ದಕ್ಷಿಣ ಕನ್ನಡಸುದ್ದಿ

ಮಂಗಳೂರು ವಕೀಲರ ಸಂಘದಿಂದ ಪದ್ಮಶ್ರೀ ಹರೇಕಳ ಹಾಜಬ್ಬಗೆ ಗೌರವ ಸನ್ಮಾನ – ಕಹಳೆ ನ್ಯೂಸ್

ಮಂಗಳೂರು: ಅಕ್ಷರ ಸಂತ ಅಂತಲೇ ಖ್ಯಾತಿ ಪಡೆದ ಹರೇಕಳ ಹಾಜಬ್ಬ ಅವರಿಗೆ ಮಂಗಳೂರಿನ ವಕೀಲರ ಸಂಘದಿಂದ ಸನ್ಮಾನ ಮಾಡಲಾಗಿದೆ.

ವಕೀಲರ ಸಂಘದ ವಾರ್ಷಿಕೋತ್ಸವ ಇತ್ತೀಚೆಗೆ ಮಂಗಳೂರಿನ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಆವರಣದಲ್ಲಿ ನಡೆಯಿತು. ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಮುರಳಿಧರ ಪೈಯವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

harekala hajabba 1 2

ಜಾಹೀರಾತು
ಜಾಹೀರಾತು
ಜಾಹೀರಾತು

ಹಾಜಬ್ಬ ಅವರ ಕನಸಿಗೆ ಸಹಕಾರಿಯಾಗುವಂತೆ ವಕೀಲರು ಸಂಗ್ರಹಿಸಿದ ಸುಮಾರು 2 ಲಕ್ಷ ರೂ.ಗಳನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಮಂಗಳೂರು ವಕೀಲರ ಸಂಘದ ಸದಸ್ಯರಿಂದ ರಾಜ್ಯಮಟ್ಟದ ಪ್ರಶಸ್ತಿ ಪಡೆದ ತುಳುನಾಡ ವೈಭವ ಎಂಬುವಂತಹ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನಗೊಂಡಿತು. ಮಂಗಳೂರು ವಕೀಲರ ಸಂಘದ ವಾರ್ಷಿಕೋತ್ಸವದಲ್ಲಿ ನ್ಯಾಯಾಧೀಶರು ಮತ್ತು ವಕೀಲರು ತಮ್ಮ ಕುಟುಂಬ ಸದಸ್ಯರೊಂದಿಗೆ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

harekala hajabba

ಹಾಜಬ್ಬ ಕಳೆದ 20 ವರ್ಷಗಳಿಂದ ದಕ್ಷಿಣ ಕನ್ನಡದ ಕೊಣಾಜೆ ಸಮೀಪದ ಹರೇಕಳ ನ್ಯೂ ಪಡ್ಪು ಗ್ರಾಮದಲ್ಲಿ ಬಡ ಮಕ್ಕಳಿಗೆ ಶಿಕ್ಷಣವನ್ನು ನೀಡುತ್ತಿದ್ದಾರೆ. ವಿಶೇಷವೆಂದರೆ ತನಗಿಲ್ಲದ ಶಿಕ್ಷಣ ತನ್ನ ಊರಿನ ಮಕ್ಕಳಿಗೆ ಸಿಗಬೇಕು ಎನ್ನುವ ಮಹದಾಸೆಯಿಂದ ಕಿತ್ತಳೆ ಮಾರುತ್ತಿದ್ದ ಹರೇಕಳ ಹಾಜಬ್ಬ, ಕಿತ್ತಳೆ ಮಾರಿ ಜೀವನ ಸಾಗಿಸಿ ಉಳಿದ ಹಣದಿಂದಲೇ ಅಂಗನವಾಡಿ ಆರಂಭಿಸುವ ಮೂಲಕ ಶಿಕ್ಷಣ ನೀಡುತ್ತಿದ್ದಾರೆ. ಹಾಜಬ್ಬರಿಗೆ ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಅವರು ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ.