Breaking News : ಕಾಂಗ್ರೆಸ್ ಜೆಡಿಎಸ್ ನಡುವೆ ಭಾರಿ ಭಿನ್ನಮತ ಸ್ಫೋಟ ; ಸಭೆಯಿಂದ ಅರ್ಧಕ್ಕೆ ಹೊರನಡೆದ್ರು ಸಿದ್ದರಾಮಯ್ಯ! – ಕಹಳೆ ನ್ಯೂಸ್

ಡಾ.ಯತೀಂದ್ರ ಸಿದ್ದರಾಮಯ್ಯಗೆ ಕ್ಯಾಬಿನೆಟ್ ಎಂಟ್ರಿ ನೀಡಲು ಕೈ ನಾಯಕರು ರೆಡ್ ಸಿಗ್ನಲ್ ನೀಡಿ ಸಿದ್ದರಾಮಯ್ಯರ ಕಣ್ಣು ಕೆಂಪಾಗಿಸಿದ್ದಾರೆ.
ಸಂಪುಟ ರಚನೆ ಸಂಬಂಧ ನಿನ್ನೆ ಕಾಂಗ್ರೆಸ್-ಜೆಡಿಎಸ್ ನಾಯಕರ ಸಭೆ ನಡೆಯಿತು. ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಕಾಂಗ್ರೆಸ್ ರಾಜ್ಯ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಡಾ. ಜಿ.ಪರಮೇಶ್ವರ್, ಡಿ.ಕೆ. ಶಿವಕುಮಾರ್, ಹೆಚ್.ಡಿ. ರೇವಣ್ಣ ಸಭೆಯಲ್ಲಿ ಭಾಗಿಯಾಗಿದ್ದರು.
ಸಭೆಯಲ್ಲಿ ಪುತ್ರನ ಪರ ತೀವ್ರ ಲಾಬಿ ನಡೆಸಿದ ಮಾಜಿ ಸಿಎಂ ಸಿದ್ದರಾಮಯ್ಯ ಶತ ಪ್ರಯತ್ನಕ್ಕೆ ಮಣಿಯದ ಕಾಂಗ್ರೆಸ್ ನಾಯಕರು ಡಾ.ಯತೀಂದ್ರ ಸಿದ್ದರಾಮಯ್ಯಗೆ ಸಚಿವ ಸ್ಥಾನ ನೀಡಲು ನಿರಾಕರಿಸಿದ್ದಾರೆ. ಪುತ್ರನಿಗೆ ಸಚಿವ ಸ್ಥಾನ ಕೈ ತಪ್ಪಿದ್ದರಿಂದ ಮುನಿಸಿಕೊಂಡ ಸಿದ್ದರಾಮಯ್ಯ ಸಭೆಯಿಂದ ಅರ್ಧದಲ್ಲೇ ಹೊರ ನಡೆದರು ಎನ್ನಲಾಗಿದೆ.
ಸಾಕಷ್ಟು ಪ್ರಯತ್ನ ನಡೆಸಿದರೂ ತಮ್ಮ ಮಾತಿಗೆ ಮನ್ನಣೆ ನೀಡದ ಕೈ ನಾಯಕರ ವಿರುದ್ಧ ಗರಂ ಆದ ಸಿದ್ದರಾಮಯ್ಯ ಕಣ್ಣು ಕೆಂಪಗೆ ಮಾಡಿಕೊಂಡು ಹೊರಟು ಹೋದರು. ಈ ವೇಳೆ ಎದುರಾದ ಮಾಧ್ಯಮ ಪ್ರತಿನಿಧಿಗಳಿಗೂ ಯಾವುದೇ ಪ್ರತಿಕ್ರಿಯೆ ನೀಡದೇ ಹೋಟೆಲ್‌ನಿಂದ ನಿರ್ಗಮಿಸಿದರು.