Wednesday, January 22, 2025
ಮೂಡಬಿದಿರೆ

ಭಾರತೀಯ ಜೈನ್ ಮಿಲನ್ ಮೂಡುಬಿದಿರೆ ಹಾಗೂ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಜಂಟಿ ಆಶ್ರಯದಲ್ಲಿ “ಸಂಮಿಲನ್ 2021” ಮಂಗಳೂರು ವಿಭಾಗ ಮಟ್ಟದ ಕ್ರೀಡಾಕೂಟ- ಕಹಳೆ ನ್ಯೂಸ್

ಮೂಡುಬಿದಿರೆ: ಬೆಳ್ಳಿಹಬ್ಬ ಸಂಭ್ರಮದಲ್ಲಿರುವ ಭಾರತೀಯ ಜೈನ್ ಮಿಲನ್ ಮೂಡುಬಿದಿರೆ ಹಾಗೂ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಕಲ್ಲಬೆಟ್ಟುವಿನಲ್ಲಿ ನಡೆದ `ಸಂಮಿಲನ್ 2021′ ಮಂಗಳೂರು ವಿಭಾಗ ಮಟ್ಟದ ಕ್ರೀಡಾಕೂಟದಲ್ಲಿ ಅತಿಥೇಯ ಮೂಡುಬಿದಿರೆ ಜೈನ್ ಮಿಲನ್ ಚಾಂಪಿಯನ್ ಪ್ರಶಸ್ತಿ ಹಾಗೂ ನಾರಾವಿ ಜೈನ್ ಮಿಲನ್ ರನ್ನರ್ ಅಪ್ ಪ್ರಶಸ್ತಿ ಪಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಪಂಡಿತಾಚಾರ್ಯವರ್ಯ ಸ್ವಾಮೀಜಿ, ಎಕ್ಸಲೆಂಟ್ ವಿದ್ಯಾಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್, ಜೈನ್ ಮಿಲನ್ ಅಧ್ಯಕ್ಷ ನಮಿರಾಜ್ ಜೈನ್, ಚೌಟರ ಅರಮನೆಯ ಕುಲದೀಪ ಎಂ, ಜೈನ್ ಮಿಲನ್ ವಲಯ 8ರ ಅಧ್ಯಕ್ಷ ಪುಷ್ಪರಾಜ್ ಜೈನ್, ಉಪಾಧ್ಯಕ್ಷ ಸುದರ್ಶನ್ ಜೈನ್, ನಿರ್ದೇಶಕ ಜಯರಾಜ್ ಕಂಬ್ಳಿ ,ಮೂಡುಬಿದಿರೆ ಜೈನ್ ಮಿಲನ್ ಕಾರ್ಯದರ್ಶಿ ಜಿನೇಂದ್ರ ಹೆಗ್ಡೆ, ಕೋಶಾಧಿಕಾರಿ ಮಿತ್ರಸೇನ ಅತಿಥೇಯರಾದ ಶಿಶುಪಾಲ್ ಶೆಟ್ಟಿ, ಶೈಲೇಶ್ಚಂದ್ರ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು