Wednesday, November 13, 2024
ರಾಷ್ಟ್ರೀಯಸುದ್ದಿ

ಪ್ರತಿಭಟನೆಯಲ್ಲಿ ಮೃತಪಟ್ಟ ರೈತರ ಬಗ್ಗೆ ದಾಖಲೆಗಳಿಲ್ಲ, ಪರಿಹಾರ ನೀಡುವ ಪ್ರಶ್ನೆಯೇ ಇಲ್ಲ: ಸಂಸತ್ತಿನಲ್ಲಿ ಖಡಕ್ ಉತ್ತರ ನೀಡಿದ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ – ಕಹಳೆ ನ್ಯೂಸ್

ನವದೆಹಲಿ: ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾಗ ರೈತರು ಮೃತಪಟ್ಟಿರುವ ಬಗ್ಗೆ ಸರ್ಕಾರದ ಬಳಿ ಯಾವುದೇ ದಾಖಲೆಗಳಿಲ್ಲ. ಹೀಗಾಗಿ ಪರಿಹಾರ ನೀಡುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ ಅವರು ಸಂಸತ್‌ನಲ್ಲಿ ಲಿಖಿತ ಪ್ರತಿಕ್ರಿಯೆ ನೀಡಿದ್ದಾರೆ.

ಸಂಸತ್‌ ಅಧಿವೇಶನದಲ್ಲಿ ರೈತರ ಪ್ರತಿಭಟನೆ ಕುರಿತು ಪ್ರತಿಪಕ್ಷಗಳು ಧ್ವನಿ ಎತ್ತಿದವು. ಪ್ರತಿಭಟನೆ ವೇಳೆ ಸಾವಿಗೀಡಾದ ರೈತರ ಕುಟುಂಬಗಳಿಗೆ ಹಣಕಾಸು ನೆರವು ನೀಡಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದವು. ಇದಕ್ಕೆ ಪ್ರತಿಕ್ರಿಯಿಸಿದ ಕೃಷಿ ಸಚಿವರು, ಈ ಸಂಬಂಧ ಕೃಷಿ ಇಲಾಖೆಯಲ್ಲಿ ಯಾವುದೇ ದಾಖಲೆಗಳಿಲ್ಲ. ಆದ್ದರಿಂದ ಪರಿಹಾರ ನೀಡುವ ಪ್ರಶ್ನೆಯೇ ಬರುವುದಿಲ್ಲ ಎಂದು ತಿಳಿಸಿದ್ದಾರೆ.  ಇದನ್ನೂ ಓದಿ : ಮಂಗಳೂರಿನ ವೈದ್ಯ ರತ್ನಾಕರ ಕಾಮ ಪುರಾಣ ; 10 ಮಂದಿ ಮಹಿಳೆಯರ ವಿಚಾರಣೆ

ಜಾಹೀರಾತು
ಜಾಹೀರಾತು
ಜಾಹೀರಾತು

Narendra Singh Tomar

ಜಾಹೀರಾತು
ಜಾಹೀರಾತು
ಜಾಹೀರಾತು

ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ ಒಂದು ವರ್ಷದಿಂದ ಸಾವಿರಾರು ಸಂಖ್ಯೆಯಲ್ಲಿ ರೈತರು ದೆಹಲಿಯ ಗಡಿಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ವರ್ಷದ ಅವಧಿಯಲ್ಲಿ ಸುಮಾರು 700 ರೈತರು ಪ್ರತಿಭಟನಾ ಸ್ಥಳದಲ್ಲಿ ಮೃತಪಟ್ಟಿದ್ದಾರೆಂದು ರೈತ ನಾಯಕರು ಹಾಗೂ ಪ್ರತಿಪಕ್ಷಗಳು ಹೇಳಿವೆ.

ರೈತರ ಪ್ರತಿಭಟನೆಗೆ ಮಣಿದು ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ಮೋದಿ ಅವರು ಘೋಷಿಸಿದರು. ನಂತರ ಸಂಸತ್‌ ಅಧಿವೇಶನದಲ್ಲಿ ಕಾಯ್ದೆಗಳನ್ನು ಹಿಂಪಡೆಯುವ ಮಸೂದೆ ಅಂಗೀಕಾರಕ್ಕೆ ಕೇಂದ್ರ ಸರ್ಕಾರ ಮುಂದಾಯಿತು. ಚರ್ಚೆಗೆ ಒಳಪಡಿಸದೇ ಮಸೂದೆಗಳ ಅಂಗೀಕಾರ ಸರಿಯಲ್ಲ. ಪ್ರತಿಭಟನೆ ವೇಳೆ ನೂರಾರು ರೈತರು ಸಾವನ್ನಪ್ಪಿದ್ದಾರೆ. ಅವರಿಗೆ ಕೇಂದ್ರ ಸರ್ಕಾರ ಪರಿಹಾರ ನೀಡಬೇಕು. ಹೀಗಾಗಿ ಮಸೂದೆಯನ್ನು ಚರ್ಚೆಗೆ ಒಳಪಡಿಸಬೇಕು ಎಂದು ವಿಪಕ್ಷಗಳು ಒತ್ತಾಯಿಸಿದ್ದವು. ಪ್ರತಿಪಕ್ಷಗಳ ವಿರೋಧದ ನಡುವೆಯೂ ಮಸೂದೆಗೆ ಅಂಗೀಕಾರ ನೀಡಲಾಯಿತು. ಇದನ್ನೂ ಓದಿ:  ಕೋವಿಡ್-19 ರೂಪಾಂತರಿ ಒಮಿಕ್ರಾನ್ ಭೀತಿ – ಕೋವಿಡ್ ನೆಗೆಟಿವ್ ವರದಿ ಬಂದರೂ ಏಳು ದಿನ ಕ್ವಾರಂಟೈನ್ ಕಡ್ಡಾಯ : ಆರೋಗ್ಯ ಸಚಿವ ಸುಧಾಕರ್

FarmersProtestDelhi 4 e1609257461683

ಕೋವಿಡ್‌ನಿಂದ ಬಳಲುತ್ತಿದ್ದವರಿಗೆ ಆಮ್ಲಜನಕ ಪೂರೈಕೆಯಲ್ಲಿ ವಿಳಂಬವಾದಾಗ ನೂರಾರು ಸಂಖ್ಯೆಯಲ್ಲಿ ಜನ ಸಾವಿಗೀಡಾಗಿದ್ದರು. ಮೃತ ಕುಟುಂಬದವರಿಗೆ ಪರಿಹಾರ ನೀಡಬೇಕು ಎಂದು ಪ್ರತಿಪಕ್ಷಗಳು ಕೇಂದ್ರವನ್ನು ಒತ್ತಾಯಿಸಿದ್ದರು. ಆಗಲೂ ಸಹ ಕೇಂದ್ರ ಸರ್ಕಾರ, ನಮ್ಮಲ್ಲಿ ಆಕ್ಸಿಜನ್‌ ಕೊರತೆಯಿಂದ ಮೃತಪಟ್ಟವರ ಬಗ್ಗೆ ದತ್ತಾಂಶ ಇಲ್ಲ ಎಂದು ಹಾರಿಕೆಯ ಉತ್ತರವನ್ನು ನೀಡಿ ಆಕ್ರೋಶಕ್ಕೆ ಗುರಿಯಾಗಿತ್ತು. ಈಗ ಮತ್ತೆ ಅದೇ ರೀತಿಯ ಹೇಳಿಕೆ ಮೂಲಕ ಟೀಕೆಗೆ ಗುರಿಯಾಗಿದೆ.