ವಿವೇಕಾನಂದ ಕಾಲೇಜಿನಲ್ಲಿ ಆ್ಯಂಡ್ರಾಯಿಡ್ ಡೆವೆಲಪ್‍ಮೆಂಟ್ ಕುರಿತಾಗಿ ಒಂದು ದಿನದ ಕಾರ್ಯಾಗಾರ- ಕಹಳೆ ನ್ಯೂಸ್
ಪುತ್ತೂರು: ಇಂದಿನ ದಿನಗಳಲ್ಲಿ ಆ್ಯಂಡ್ರಾಯ್ಡ್ ನ ಬೆಳವಣಿಗೆ ಹಾಗೂ ಅದಕ್ಕೆ ಬೇಕಾದ ಎಲ್ಲಾ ವಿಚಾರಗಳು ಪಿಎಚ್ಪಿ, ಎಕ್ಸ್‍ಎಂಎಲ್, ಜಾವಾ ಎಲ್ಲವನ್ನೂ ಮಕ್ಕಳು ತಿಳಿದಿರಬೇಕು. ನಿಮ್ಮ ಬೆಳೆವಣಿಗೆಯೊಂದಿಗೆ ಈಗಿನ ಹೊಸ ಆ್ಯಂಡ್ರಾಯ್ಡ್ ಬೆಳವಣಿಗೆಯನ್ನು ಕಲಿಯಬೇಕು ಎಂದು ಮಂಗಳೂರಿನ ಎಐಎಂಐಟಿ ಕಾಲೇಜಿನ ಎಂಸಿಎ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರೊ. ಥಾಮಸ್ ಸಿ.ಜಿ. ಹೇಳಿದರು.
ವಿವೇಕಾನಂದ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗ ಮತ್ತು ಐಟಿ ಕ್ಲಬ್ ಹಾಗೂ ಐಕ್ಯೂಎಸಿ ಘಟಕ ಇದರ ಆಶ್ರಯದಲ್ಲಿ ಆಯೋಜಿಸಿಲಾದ ಮೊಬೈಲ್ ಅಪ್ಲಿಕೇಶನ್ ಡೆವಲಪ್ ಮೆಂಟ್ ಪಿ ಹೆಚ್ ಪಿ ವೆಬ್ ಡೆವಲಪ್ ಮೆಂಟ್ ಕುರಿತಾಗಿ ನಡೆದ ಒಂದು ದಿನದ ಕಾರ್ಯಾಗಾರದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಇದನ್ನೂ ಓದಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದಿಂದ ಗುರುವಾಯನಕೆರೆಯಲ್ಲಿ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆ – ಸಚಿವ ಕೋಟ ಶ್ರೀನಿವಾಸ ಪೂಜಾರಿ, ಎಸ್ ಅಂಗಾರ ಭಾಗಿ –ಕಹಳೆ ನ್ಯೂಸ್
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ಮಹಾವಿದ್ಯಾಲಯದ ಪ್ರಾಂಶುಪಾಲ ಪ್ರೊ. ಗಣಪತಿ ಭಟ್ ಮಾತನಾಡಿ, ಮಕ್ಕಳು ಆ್ಯಂಡ್ರಾಯ್ಡ್ ಬಗ್ಗೆ ಹೆಚ್ಚಾಗಿ ತಿಳಿದುಕೊಳ್ಳಬೇಕು. ಈಗಿನ ಈ ಪರಿಸ್ಥಿತಿಯಲ್ಲಿ ಆ್ಯಂಡ್ರಾಯ್ಡ್ ಅಪ್ಲಿಕೇಶನ್ ಹೇಳಿಕೊಳ್ಳುವಷ್ಟು ನಾವು ಸನ್ನದ್ಧರಾಗಿಬೇಕು ಎಂದು ತಿಳಿಸಿದರು. ಈ ಸಂದರ್ಭ ವೇದಿಕೆಯಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ಪ್ರಕಾಶ್ ಕುಮಾರ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕಂಪ್ಯೂಟರ್ ಸೈನ್ಸ್ ವಿಭಾಗದ ಉಪನ್ಯಾಸಕ ಗುರುಕಿರಣ್ ಸ್ವಾಗತಿಸಿದರು. ಉಪನ್ಯಾಸಕಿ ಜೀವಿತ ಕಾರ್ಯಕ್ರಮವನ್ನು ನಿರೂಪಿಸಿದರು