Recent Posts

Monday, January 20, 2025
ದಕ್ಷಿಣ ಕನ್ನಡರಾಜ್ಯಸುದ್ದಿ

ಮಂಗಳೂರಿಗೆ ಆಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ – ಕಹಳೆ ನ್ಯೂಸ್

ಮಂಗಳೂರು,ಡಿ 02 : ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರು ಇದೇ ಡಿಸೆಂಬರ್ 2 ರಿಂದ 5ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಹಮ್ಮಿಕೊಳ್ಳಲಾಗಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರವಾಸ ಕೈಗೊಂಡಿದ್ದಾರೆ.


ಈ ಹಿನ್ನಲೆಯಲ್ಲಿ ರಾಜ್ಯಪಾಲರು ಡಿ.2ರ ಗುರವಾರ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.ಅವರನ್ನು ಜಿಲ್ಲಾಡಳಿತ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಸಹಾಯಕ ಆಯುಕ್ತ ಮದನ್ ಮೋಹನ್ ಸೇರಿದಂತೆ ಜಿಲ್ಲಾಡಳಿತ ಹಿರಿಯ ಅಧಿಕಾರಿಗಳು ರಾಜ್ಯಪಾಲರನ್ನು ಸ್ವಾಗತಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ನಂತರ ರಾಜ್ಯಪಾಲರು ಧರ್ಮಸ್ಥಳದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ತೆರಳಿದರು.