Sunday, November 24, 2024
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

89ನೇ ಸರ್ವಧರ್ಮ ಸಮ್ಮೇಳನದ ಅಧಿವೇಶನಕ್ಕೆ ಚಾಲನೆ ನೀಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್- ಕಹಳೆ ನ್ಯೂಸ್

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಮಾವೇಶಗೊಂಡ 89ನೇ ಸರ್ವಧರ್ಮ ಸಮ್ಮೇಳನದ ಅಧಿವೇಶನವನ್ನು ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಚಾಲನೆ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಬಳಿಕ ಮಾತನಾಡಿದ ರಾಜ್ಯಪಾಲರು, ಧರ್ಮಸ್ಥಳದಲ್ಲಿ ನಡೆಯುತ್ತಿರುವ ಲಕ್ಷ ದೀಪೋತ್ಸವದ ಅಂಗವಾಗಿ ಸರ್ವಧರ್ಮ ಸಮ್ಮೇಳನದಲ್ಲಿ ಪಾಲ್ಗೊಳ್ಳುತ್ತಿರುವುದು ಮತ್ತು ಭಗವಂತನ ಸಾನಿಧ್ಯದಲ್ಲಿರುವುದು ಬಹಳಷ್ಟು ಸಂತಸವಾಗುತ್ತಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ದಕ್ಷಿಣ ಭಾರತದ ಪ್ರಸಿದ್ದ ವಾದ ಸರ್ವಧರ್ಮಿಯರು ಸಂದರ್ಶಿಸುವ ಕ್ಷೇತ್ರವಾಗಿದೆ. ಅನ್ನದಾನ, ವಿದ್ಯಾದಾನ, ಆರೋಗ್ಯಸೇವೆ, ಆಯುರ್ವೇದ, ಯೋಗ, ಧಾರ್ಮಿಕ, ಸಂಸ್ಕøತಿಗಳ ಒಂದು ಸಂಗಮ ಕ್ಷೇತ್ರ ಇದಾಗಿದೆ ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಸಭಾಧ್ಯಕ್ಷತೆಯನ್ನು ಬೆಂಗಳೂರಿನ ಎಸ್- ವ್ಯಾಸ ಯುನಿವರ್ಸಿಟಿಯ ನಿವೃತ ಕುಲಪತಿ ಪ್ರೋ. ರಾಮಚಂದ್ರ ಜಿ.ಭಟ್ ವಹಿಸಿದರು. ವೇದಿಕೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ, ಡಾ.ಸಾರ್ಫಾಜ್ ಚಂದ್ರಗುತ್ತಿ, ಡಾ.ಎಂ.ಎಸ್ ಪದ್ಮ, ಫಾ. ವೀರೇಶ್ ಮೊರಸ್ ಸೇರಿದಂತೆ ವಿವಿಧ ಧರ್ಮಗಳ ಪ್ರತಿನಿಧಿಗಳು, ವಿಧ್ವಾಂಸರು ಹಾಗೂ ಗಣ್ಯರು ಉಪಸ್ಥಿತರಿದ್ದರು.