Recent Posts

Monday, January 20, 2025
ಸುದ್ದಿ

ಬಿಜೆಪಿ ಮೂಲ್ಕಿ ಮೂಡಬಿದ್ರೆ ಮಂಡಲ ಕಿನ್ನಿಗೋಳಿ ಮತ್ತು ಮೂಲ್ಕಿ ನಗರ ಮಹಾಶಕ್ತಿ ಕೇಂದ್ರದ ಆಶ್ರಯದಲ್ಲಿ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆ –ಕಹಳೆ ನ್ಯೂಸ್

ಕಿನ್ನಿಗೋಳಿ ಮತ್ತು ಮೂಲ್ಕಿ ನಗರ ಮಹಾಶಕ್ತಿ ಕೇಂದ್ರದ ಆಶ್ರಯದಲ್ಲಿ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯು ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ದೀಪ ಬೆಳಗಿಸಿ ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಲಾಯಿತು. ಅತಿಥಿಗಳನ್ನು ಮೂಲ್ಕಿ ಮೂಡಬಿದ್ರೆ ಮಂಡಲ ಅಧ್ಯಕ್ಷ ಸುನಿಲ್ ಆಳ್ವ ಸ್ವಾಗತಿಸಿದರು.

ಬಳಿಕ ಮಾತಾಡಿದ ಶಾಸಕ ಉಮಾನಾಥ್ ಕೋಟ್ಯಾನ್ “ಡಿ.10 ರಂದು ವಿಧಾನ ಪರಿಷತ್ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮೂಲ್ಕಿ ಮೂಡಬಿದ್ರೆ ಮಂಡಲ ವ್ಯಾಪ್ತಿಯ 6 ಗ್ರಾಮ ಪಂಚಾಯತ್ ಮತ್ತು ಒಂದು ನಗರ ಪಂಚಾಯತ್ ಗೆ ಒಳಪಟ್ಟ ಸದಸ್ಯರು ಮತ್ತು ಕಾರ್ಯಕರ್ತರನ್ನು ಇಲ್ಲಿ ಆಹ್ವಾನಿಸಲಾಗಿದೆ. ವಿಧಾನ ಪರಿಷತ್ ಗೆ ಒಂದೇ ಮತ ಚಲಾವಣೆ ಮಾಡುವ ಅವಕಾಶವಿದ್ದು ಕೋಟ ಶ್ರೀನಿವಾಸ್ ಪೂಜಾರಿ ಅವರ ಹೆಸರಿನ ಮುಂದೆ 1 ಎಂದು ಬರೆಯುವ ಮೂಲಕ ಅವರನ್ನು ಬೆಂಬಲಿಸಬೇಕು. ಕೋಟರನ್ನು ಮತ್ತೊಮ್ಮೆ ಆಯ್ಕೆ ಮಾಡಿ ಕಳುಹಿಸುವ ಮೂಲಕ ಕ್ಷೇತ್ರದ ಗೌರವ, ಘನತೆಯನ್ನು ಎತ್ತಿ ಹಿಡಿಯಬೇಕು” ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ವಿಧಾನ ಪರಿಷತ್ ಚುನಾವಣಾ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಮಾತಾಡುತ್ತ, “ಒಬ್ಬನೇ ಅಭ್ಯರ್ಥಿ ಒಂದೇ ಮತ ಎನ್ನುವ ಮಾತನ್ನು ಯಾಕೆ ಒತ್ತು ಕೊಟ್ಟು ಹೇಳುತ್ತಿದ್ದೇವೆ ಎಂದರೆ ಕಳೆದ ಬಾರಿ 250ಕ್ಕೂ ಹೆಚ್ಚು ಮತಗಳು ಅಸಿಂಧುವಾಗಿದೆ. ಇಂತಹ ಬೆಳವಣಿಗೆ ರಾಜಕೀಯದಲ್ಲಿ ಭಾರೀ ಬದಲಾವಣೆ ತರಬಲ್ಲುದು. ಹೀಗಾಗಿ ಒಂದು ಮತವನ್ನು ಕೂಡ ಹಾಳಾಗಲು ನಾವು ಬಿಡಬಾರದು. ಈಗಿರುವ ಮತಗಳಿಗಿಂತ ಕನಿಷ್ಠ 100 ಮತಗಳನ್ನಾದರೂ ಹೆಚ್ಚು ಬೀಳುವಂತೆ ಮಾಡಲು ಪ್ರತಿಯೊಬ್ಬರೂ ಕೂಡ ಶ್ರಮ ವಹಿಸಬೇಕು. ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿದರೆ ಬಹುಮತ ಪಡೆಯುವುದು ಕಷ್ಟವಲ್ಲ. ನಾನು ಕಳೆದ 13 ವರ್ಷಗಳಿಂದ ಪಂಚಾಯತ್ ವ್ಯವಸ್ಥೆ ಮತ್ತು ಸದಸ್ಯರ ಪರವಾಗಿ ಅತ್ಯಂತ ಶ್ರದ್ಧೆಯಿಂದ ಕೆಲಸ ಮಾಡಿರುವ ಸಂತಸ ನನ್ನಲ್ಲಿದೆ. ಹೀಗಾಗಿ ನಾಲ್ಕನೇ ಬಾರಿ ಕಣದಲ್ಲಿದ್ದು ಪ್ರಥಮ ಪ್ರಾಶಸ್ತ್ಯ ಮತವನ್ನು ನನಗೆ ನೀಡುವ ಮೂಲಕ ಅಭಿವೃದ್ಧಿಗೆ ಸಹಕರಿಸಿ” ಎಂದು ಮನವಿ ಮಾಡಿದರು.

ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡಬಿದ್ರೆ ಮಾತಾಡುತ್ತ, “ಹಿಂದೆ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಭಾರತೀಯ ಜನತಾ ಪಾರ್ಟಿ ಮಧ್ಯೆ ಬಹಳಷ್ಟು ಅಂತರವಿತ್ತು. ಆದರೆ ಈಗ ಪಂಚಾಯತ್ ಸದಸ್ಯರು ಪಕ್ಷದ ಸಂಘಟನೆಯಲ್ಲಿ ಕೈಜೋಡಿಸಿದ್ದಾರೆ. ಇದಕ್ಕೆ ಕಾರಣ ಕಳೆದ ಬಾರಿ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಸಂಪೂರ್ಣವಾಗಿ ಪಂಚಾಯತ್ ಸದಸ್ಯರ ಜೊತೆ ಕೈಜೋಡಿಸಿತ್ತು. ಸದಸ್ಯರ ಜೊತೆಗೆ ನಾವಿದ್ದೇವೆ ಎಂದು ಭರವಸೆ ನೀಡಿದ್ದರಿಂದಲೇ ಇಂದು ಸದಸ್ಯರು ನಮ್ಮ ಜೊತೆ ನಿಂತಿದ್ದಾರೆ. ಪಕ್ಷ ನಾಲ್ಕನೇ ಬಾರಿ ಕೋಟ ಶ್ರೀನಿವಾಸ್ ಪೂಜಾರಿಯವರನ್ನು ಕಣಕ್ಕೆ ಇಳಿಸಿದ್ದು ಅಭಿನಂದನಾರ್ಹ. ತಮ್ಮಲ್ಲಿ ಅಧಿಕಾರ ಇಲ್ಲದೆ ಇದ್ದಾಗಲೂ ಗ್ರಾಮ ಪಂಚಾಯತ್ ಸದಸ್ಯರ ಬಗ್ಗೆ, ಪಂಚಾಯತ್ ಸಮಸ್ಯೆಗಳ ಬಗ್ಗೆ ಸದನದಲ್ಲಿ ಧ್ವನಿ ಎತ್ತಿದ್ದು ಇದೇ ಶ್ರೀನಿವಾಸ್ ಪೂಜಾರಿಯವರು. ಮುಜರಾಯಿ ಖಾತೆ ಸಚಿವರಾಗಿದ್ದಾಗ ರಾಜ್ಯದಲ್ಲಿನ 30,000 ಕ್ಕೂ ಅಧಿಕ ದೇವಸ್ಥಾನಗಳ ಅಭಿವೃದ್ಧಿಗೆ ಪಣ ತೊಟ್ಟು ಯಶಸ್ವಿಯಾದವರು. ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಸಂದರ್ಭದಲ್ಲಿ ಹಿಂದುಳಿದ ವರ್ಗಕ್ಕೆ ಮನೆ ನಿರ್ಮಾಣಕ್ಕೆ ನೀಡುತ್ತಿದ್ದ 1,20,000 ರೂ. ಸಾಲದು ವಸತಿ ಯೋಜನೆಗೆ ಕನಿಷ್ಠ 5 ಲಕ್ಷ ರೂ. ಆದರೂ ಬೇಕು ಎಂದು ನಿರ್ಧರಿಸಿ ಅದನ್ನು ಮಂಜೂರು ಮಾಡಿದರು. ತನ್ನ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆದಾಗ ತಾನೇ ಲೋಕಾಯುಕ್ತಕ್ಕೆ ಪತ್ರ ಬರೆದು ತನಿಖೆ ನಡೆಸಿ ಎನ್ನುವ ಮೂಲಕ ದೇಶದ ಅಪರೂಪದ ರಾಜಕಾರಣಿ ಎಂದು ಕರೆಯಲ್ಪಟ್ಟರು. ಜಿಲ್ಲೆಯಲ್ಲಿ ಇದೇ ಮೊದಲ ಬಾರಿ ಮತದಾನದ ಗೊಂದಲ ನಿವಾರಣೆಗೆ ಪ್ರಾತ್ಯಕ್ಷಿಕೆ ನಡೆಸಲಾಗುತ್ತಿದೆ. ಕಳೆದ ಬಾರಿ ಮತಗಳು ಹಾಳಾದಂತೆ ಈ ಬಾರಿ ನಡೆಯಬಾರದು. ಒಂದೇ ಮತವನ್ನು ಚಲಾಯಿಸಬೇಕಿದ್ದು ಅದು ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಚಲಾಯಿಸಬೇಕು” ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಮೂಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್, ಗಣೇಶ್ ಹೊಸಬೆಟ್ಟು, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ರಾಜೇಶ್ ಕಾವೇರಿ, ಸುಧೀರ್ ಶೆಟ್ಟಿ ಕಣ್ಣೂರು, ಕಸ್ತೂರಿ ಪಂಜ, ಹರಿಕೃಷ್ಣ ಬಂಟ್ವಾಳ, ಸಂತೋμï ರೈ ಬೋಳಿಯಾರ್, ಈಶ್ವರ್ ಕಟೀಲ್, ಮಾಧ್ಯಮ ಪ್ರಮುಖ್ ರಣ್ ದೀಪ್ ಕಾಂಚನ್ ಮತ್ತಿತ್ತರರು ಉಪಸ್ಥಿತರಿದ್ದರು.