Sunday, January 19, 2025
ಸುದ್ದಿ

ಬೆಳ್ತಂಗಡಿ ತಾಲೂಕಿನಲ್ಲಿ ಒಕ್ಕಲಿಗರ ಸಮುದಾಯ ಭವನ ನಿರ್ಮಿಸುವ ಕುರಿತು ಶಾಸಕ ಹರೀಶ್ ಪೂಂಜಾರವರು ಸಲ್ಲಿಸಿದ್ದ ಮನವಿಗೆ ಸ್ಪಂದಿಸಿ, ಅನುದಾನ ಬಿಡುಗಡೆಗೊಳಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ- ಕಹಳೆ ನ್ಯೂಸ್

ಬೆಳ್ತಂಗಡಿ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗೌಡರ ಯಾನೆ ಒಕ್ಕಲಿಗರ ಸಮುದಾಯದ ಜನತೆಯ ಬಹುದಿನಗಳ ಬೇಡಿಕೆಯ ಒಕ್ಕಲಿಗರ ಸಮುದಾಯ ಭವನ ನಿರ್ಮಿಸುವ ಕುರಿತು ಜನಪ್ರಿಯ ಶಾಸಕರಾದ ಹರೀಶ್ ಪೂಂಜಾರವರು ಸಲ್ಲಿಸಿದ್ದ ಮನವಿಗೆ ತಕ್ಷಣ ಸ್ಪಂದಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ರೂ.1.50 ಕೋಟಿ ವೆಚ್ಚದ ಅನುದಾನವನ್ನು ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿಯವರು ಬಿಡುಗಡೆಗೊಳಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಹಾಗೂ ಶಾಸಕರಾದ ಹರೀಶ್ ಪೂಂಜಾರವರಿಗೆ ಗ್ರಾಮಸ್ಥರು ಹೃತ್ಪೂರ್ವಕ ಧನ್ಯವಾದವನ್ನು ಸಲ್ಲಿಸಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು