Sunday, January 19, 2025
ಬೆಳ್ತಂಗಡಿ

ಸೂರ್ಯನಗರ ನೆಲ್ಯಾಡಿ ಶ್ರೀ ರಾಮ ವಿದ್ಯಾಲಯದ ದಶಮಾನೋತ್ಸವದ ನಿಮಿತ್ತ ಡಿಸೆಂಬರ್ 8 ರಂದು ನೂತನವಾಗಿ ನಿರ್ಮಿಸಿದ ವಿದ್ಯಾಮಂದಿರ ದಾಶರಥಿಯ ಲೋಕಾರ್ಪಣೆ – ಕಹಳೆ ನ್ಯೂಸ್

ನೆಲ್ಯಾಡಿ : ಶ್ರೀ ರಾಮ ವಿದ್ಯಾಲಯ ಸೂರ್ಯನಗರ ನೆಲ್ಯಾಡಿ, ದಶಮಾನೋತ್ಸವದ ನಿಮಿತ್ತ, ನೂತನವಾಗಿ ನಿರ್ಮಿಸಿದ ವಿದ್ಯಾಮಂದಿರ ‘ದಾಶರಥಿಯ’ ಲೋಕಾರ್ಪಣೆ, ನೂತನ ಶ್ರೀರಾಮ ಕ್ರೀಡಾಂಗಣ ಉದ್ಘಾಟನೆ ಮತ್ತು ಶೌಚಾಲಯ ಸಂಕೀರ್ಣಕ್ಕೆ ಭೂಮಿಪೂಜೆ ಕಾರ್ಯಕ್ರಮ, ಡಿಸೆಂಬರ್ 8 ರಂದು ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ವಹಿಸಲಿದ್ದು, ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ದಾಶರಥಿಯನ್ನು ಲೋಕಾರ್ಪಣೆ ಗೊಳಿಸಲಿದ್ದಾರೆ. ಕಾರ್ಯಕ್ರಮದಲ್ಲಿ, ಅತಿಥಿಗಳಾಗಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಸುನಿಲ್ ಕುಮಾರ್, ಶಾಸಕ ಸಂಜೀವ ಮಠಂದೂರು, ನೆಲ್ಯಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಚೇತನಾ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಲಿದ್ದಾರೆ.