ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ಅವರ ಪರಿ ನಿರ್ವಾಣ ದಿನಾಚರಣೆ: ಅಂಬೇಡ್ಕರ್ ರಚಿಸಿದ ಸಂವಿಧಾನದ ಮೂಲ ಆಶಯಗಳೇ ಪ್ರಮುಖ ಶಕ್ತಿಯಾಗಿದೆ : ಶಾಸಕ ವೇದವ್ಯಾಸ್ ಕಾಮತ್- ಕಹಳೆ ನ್ಯೂಸ್
ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ಅವರ ಪರಿ ನಿರ್ವಾಣ ದಿನಾಚರಣೆಯ ಅಂಗವಾಗಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಎಸ್.ಸಿ ಮೋರ್ಚಾ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ಅವರು ದೇಶದ ಸಾರ್ವಭೌಮತ್ವ ಹಾಗೂ ಸ್ವಾತಂತ್ರ್ಯದ ರಕ್ಷಣೆಗೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನದ ಮೂಲ ಆಶಯಗಳೇ ಪ್ರಮುಖ ಶಕ್ತಿಯಾಗಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಅಸ್ಪೃಶ್ಯತೆ ನಿವಾರಣೆ, ತಾರತಮ್ಯಗಳ ಕಂದಕಗಳನ್ನು ದೂರಗೊಳಿಸುವ ಚಿಂತನೆಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕಿದೆ ಎಂದು ಹೇಳಿದರು. Exclusive Video : ಉಪ್ಪಿನಂಗಡಿಯಲ್ಲಿ ಅನ್ಯಮತೀಯರಿಂದ ಹಿಂದೂ ಯುವಕರಿಗೆ ತಲ್ವಾರ್ ದಾಳಿ, ಮಾರಣಾಂತಿಕ ಹಲ್ಲೆ – ಆಸ್ಪತ್ರೆಗೆ ಭೇಟಿ ನೀಡಿ ಬಳಿಕ ಶಾಸಕ ಸಂಜೀವ ಮಠಂದೂರು ಹೇಳಿದ್ದೇನು..!?
ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ರಾಜ್ಯ ಮೀನುಗಾರಿಕಾ ನಿಗಮದ ಅಧ್ಯಕ್ಷರಾದ ನಿತಿನ್ ಕುಮಾರ್, ಪಾಲಿಕೆ ಸದಸ್ಯರಾದ ಪೂರ್ಣಿಮಾ, ಶೈಲೇಶ್ ಶೆಟ್ಟಿ ಅತ್ತಾವರ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ರಮೇಶ್ ಕಂಡೆಟ್ಟು, ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿ ರೂಪಾ ಡಿ ಬಂಗೇರ, ಬಿಜೆಪಿ ಎಸ್.ಸಿ ಮೋರ್ಚಾ ಮಂಡಲ ಅಧ್ಯಕ್ಷ ರಘುವೀರ್ ಬಾಬುಗುಡ್ಡೆ, ಬಿಜೆಪಿ ಮುಖಂಡರಾದ ದೀಪಕ್ ಪೈ, ವಿನೋದ್ ಮೆಂಡನ್, ಪುಷ್ಪರಾಜ್ ಶೆಟ್ಟಿ, ಪ್ರಸನ್ನ ದಡ್ಡಲ್ ಕಾಡ್, ನಿಲೇಶ್ ಕಾಮತ್, ಪ್ರಮೋದ್ ಕೊಟ್ಟಾರಿ, ಅಮಿತ ಕಲಾ, ಸಂದೀಪ್ ಬೋಳೂರು, ರಾಧಾಕೃಷ್ಣ ಕಂಕನಾಡಿ, ಪ್ರಜ್ವಲ್ ಚಿಲಿಂಬಿ, ನಾಗೇಶ್ ಕೊಡಕ್ಕಲ್, ಗೀತಾ ಸುಂಕದಕಟ್ಟೆ, ಗುರು ರಾಜೇಶ್ ಮೇಲಿನಮೊಗರು, ಮೇಘರಾಜ್ ಬಲ್ಲಾಳ್ ಭಾಗ್, ಗಣೇಶ್ ನಾಗುರಿ, ಶುಭಕರ್ ಶಕ್ತಿನಗರ, ಅರುಣ್ ವೀರನಗರ ಮುಂತಾದವರು ಉಪಸ್ಥಿತರಿದ್ದರು.