ಬಂದಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಸರೋಜಿನಿ ಉಮೇಶ್ ಗೌಡ ಅವರಿಗೆ ಜಿಲ್ಲಾಮಟ್ಟದ ಪ್ರಶಸ್ತಿ ಪ್ರಧಾನ –ಕಹಳೆ ನ್ಯೂಸ್
ಬಂದಾರು: ಜಿಲ್ಲಾ ಕೇಂದ್ರ ಗ್ರಂಥಾಲಯ, ಮಂಗಳೂರು ದ.ಕ. ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಆಯೋಜಿಸಿರುವ ಗ್ರಂಥಾಲಯ ಸದಸ್ಯತ್ವ ನೊಂದಣಿ ಅಭಿಯಾನದಲ್ಲಿ ಅತೀ ಹೆಚ್ಚು ಸದಸ್ಯತ್ವ ನೋಂದಾಯಿಸಿ ಬಂದಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಸರೋಜಿನಿ ಉಮೇಶ್ ಗೌಡ ಇವರಿಗೆ ದ.ಕ.ಜಿ.ಪಂ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟದ ಪ್ರಶಸ್ತಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ|ಕುಮಾರ್. ,ಜಿಲ್ಲಾ ಮುಖ್ಯ ಗ್ರಂಥಾಲಯ ಅಧಿಕಾರಿ ಶ್ರೀಮತಿ ಗಾಯತ್ರಿ, ಹಾಗೂ ಸಿಬ್ಬಂದಿ ವರ್ಗ, ಉಪಸ್ಥಿತರಿದ್ದರು.
ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪರಮೇಶ್ವರಿ.ಕೆ.ಗೌಡ, ಉಪಾಧ್ಯಕ್ಷರಾದ ಗಂಗಾಧರ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ, ಗ್ರಾಮ ಪಂಚಾಯತ್ ಸದಸ್ಯರುಗಳು, ಸಿಬ್ಬಂದಿ ವರ್ಗದವರು ವಿಜೇತರಿಗೆ ಅಭಿನಂದನೆ ಸಲ್ಲಿಸಿದರು.