ಬೆಂಗಳೂರು, ಮೇ 25- ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರ ಚುನಾವಣೆ ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಸರ್ಕಾರದ ವಿಶ್ವಾಸಮತ ಯಾಚನೆಗೆ ಸಂಬಂಧಿಸಿದಂತೆ ಜೆಡಿಎಸ್ ಎರಡು ಪ್ರತ್ಯೇಕ ವಿಪ್‍ಗಳನ್ನು ತನ್ನ ಶಾಸಕರಿಗೆ ನೀಡಿದೆ. ಜೆಡಿಎಸ್ ರಾಜ್ಯಾಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರು ಹಾಗೂ ಮುಖ್ಯಮಂತ್ರಿಯೂ ಆಗಿರುವ ಎಚ್.ಡಿ.ಕುಮಾರಸ್ವಾಮಿ ತಮ್ಮ ಪಕ್ಷದ ಎಲ್ಲಾ ಶಾಸಕರಿಗೆ ವಿಪ್ ನೀಡಿದ್ದಾರೆ.
ವಿಧಾನಸಭಾಧ್ಯಕ್ಷರ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಪಕ್ಷದ ಒಮ್ಮತದ ಅಭ್ಯರ್ಥಿಯಾಗಿರುವ. ಕೆ.ಆರ್.ರಮೇಶ್‍ಕುಮಾರ್ ಪರವಾಗಿ ಮತ ನೀಡುವಂತೆ ವಿಪ್ ನೀಡಿದ್ದಾರೆ. ವಿಧಾನಸಭಾಧ್ಯಕ್ಷರ ಚುನಾವಣೆಯ ನಂತರ ನಡೆಯಲಿರುವ ವಿಶ್ವಾಸಮತಯಾಚನೆ ಸಂದರ್ಭದಲ್ಲಿ ವಿಶ್ವಾಸಮತದ ಪರವಾಗಿ ಮತ ಚಲಾಯಿಸುವಂತೆ ವಿಪ್ ನೀಡಲಾಗಿದೆ. ಸಭಾಧ್ಯಕ್ಷರ ಚುನಾವಣೆ ಹಾಗೂ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಯಾವ ರೀತಿ ಮತ ಚಲಾಯಿಸಬೇಕು ಎಂಬ ಬಗ್ಗೆ ಜೆಡಿಎಸ್ ಶಾಸಕರಿಗೆ ಈಗಾಗಲೇ ಕುಮಾರಸ್ವಾಮಿ ಮಾರ್ಗದರ್ಶನ ನೀಡಿದ್ದಾರೆ