ಸರಕಾರಿ ಕೋಟಾದಲ್ಲಿ ಇಂಜಿನಿಯರಿಂಗ್ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಶುಲ್ಕ ಏರಿಕೆ ಮಾಡದಂತೆ ABVP ಕಾರ್ಯಕರ್ತರಿಂದ ಮಂಗಳೂರು ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿಯವರಿಗೆ ಮನವಿ – ಕಹಳೆ ನ್ಯೂಸ್
ಮಂಗಳೂರು: ಸರಕಾರಿ ಕೋಟಾದಲ್ಲಿ ಇಂಜಿನಿಯರಿಂಗ್ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಶುಲ್ಕ ಏರಿಕೆ ಮಾಡಬಾರದು ಮತ್ತು ಐಟಿಐ ಶಿಕ್ಷಣದ ಅವ್ಯವಸ್ಥೆಯನ್ನು ಸರಿಮಾಡಿ, ಶೈಕ್ಷಣಿಕ ವರ್ಷವನ್ನು ಏಪ್ರಿಲ್ ತಿಂಗಳೊಳಗೆ ಮುಗಿಸಬೇಕು. ಇದರೊಂದಿಗೆ ಪರೀಕ್ಷಾ ವೇಳಾಪಟ್ಟಿಯನ್ನು ವ್ಯವಸ್ಥಿತಗೊಳಿಸಬೇಕು ಹಾಗೂ ದಾಖಲಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯನ್ನು ತರಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರಿಗೆ ಮನವಿ ಸಲ್ಲಿಸಿದರು.
ವಿದ್ಯಾರ್ಥಿಗಳ ಪ್ರತಿಭಟನಾ ನಿರತ ಸ್ಥಳಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಶಾಸಕ ಡಾ.ಭರತ್ ಶೆಟ್ಟಿಯವರು ಶಿಕ್ಷಣ ಕ್ಷೇತ್ರದಲ್ಲಿ ಯಾವುದೇ ಲೋಪದೋಷಗಳಾದ ಮೊದಲಿಗೆ ಅದರ ಅರಿವು ಬರುವುದು ವಿದ್ಯಾರ್ಥಿಗಳಿಗೆ. ನೀವು ನಿಮ್ನ ಸಮಸ್ಯೆಗಳನ್ನು ಈಗ ನಮ್ಮ ಗಮನಕ್ಕೆ ತಂದಿದ್ದಿರಿ. ಇದನ್ನು ಸರಕಾರ, ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವರಿಗೆ ಮನವರಿಕೆ ಮಾಡಿ ಕಾನೂನು ಮತ್ತು ಸರಕಾರದ ವ್ಯಾಪ್ತಿಯಲ್ಲಿ ತೆಗೆದುಕೊಳ್ಳಬಹುದಾದ ಎಲ್ಲ ಪ್ರಯತ್ನಗಳನ್ನು ಮಾಡಿ ಈ ಸಮಸ್ಯೆಗಳನ್ನು ಖಂಡಿತ ಬಗೆಹರಿಸಲಾಗುವುದು ಎಂದು ಹೇಳಿದರು.