BIGG NEWS : ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸ್ಪೋಟ : ನಾಳೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ-ಕಹಳೆ ನ್ಯೂಸ್
ಬೆಂಗಳೂರು : ರಾಜ್ಯದ ಶಾಲಾ-ಕಾಲೇಜುಗಳಲ್ಲಿ (School-College) ಕೊರೊನಾ (Corona) ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai) ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ (Minister B.C. Nagesh) ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್ 9 ರಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ಶಿಕ್ಷಣ ಹಾಗೂ ಆರೋಗ್ಯ ಇಲಾಖೆಯ ತಜ್ಞರು ಪಾಲ್ಗೊಳ್ಳಲಿದ್ದಾರೆ. ಶಾಲೆಗಳ ಕುರಿತು ಈಗಾಗಲೇ ಹೊರಡಿಸಿರುವ ಮಾರ್ಗಸೂಚಿಯನ್ನು ಬದಲಾದ ಪರಿಸ್ಥಿತಿಗೆ ತಕ್ಕಂತೆ ಪರಿಷ್ಕರಣೆಮಾಡುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ರಾಜ್ಯದ 130 ಶಾಲಾ ಮಕ್ಕಳಿಗೆ ಕೊರನಾ ಸೋಂಕು ದೃಢಪಟ್ಟಿದ್ದು, ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಪೋಷಕರಿಗೆ ಆತಂಕದ ಬೇಡ. ಒಮಿಕ್ರಾನ್ ಅಪಾಯಕಾರಿ ಅಲ್ಲ ಎಂದು ತಜ್ಞರು ಹೇಳಿದ್ದಾರೆ. ಹೀಗಾಗಿ ಶಾಲೆ-ಕಾಲೇಜುಗಳನ್ನು ಮುಚ್ಚುವ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದರು.