Sunday, January 19, 2025
ಸುದ್ದಿ

ಉಪ್ಪಿನಂಗಡಿ: ಕಾರು ಮತ್ತು ಲಾರಿಗಳ ನಡುವೆ ಸರಣಿ ಅಪಘಾತ-3 ಮಂದಿಗೆ ಗಾಯ-ಕಹಳೆ ನ್ಯೂಸ್

ಉಪ್ಪಿನಂಗಡಿ: ಪಂಜಾಲ ಎಂಬಲ್ಲಿ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದು ಮಗುಚಿ ರಸ್ತೆ ಮಧ್ಯೆ ಬಿದ್ದಿದ್ದು, ಈ ವೇಳೆ ಕಾರಿನ ಹಿಂದಿನಿಂದ ಬರುತ್ತಿದ್ದ ಇನ್ನೊಂದು ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮಗುಚಿ ಬಿದ್ದ ಸರಣಿ ಅಪಘಾತ ನಡೆದಿದೆ.

ಮೆಲ್ಕಾರ್ ನಿಂದ ನೆಲ್ಯಾಡಿ ಕಡೆ ಹೋಗುತ್ತಿದ್ದ ಕಾರಿಗೆ ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಲಾರಿ ಢಿಕ್ಕಿ ಹೊಡೆದಿದ್ದು, ಕಾರು ಚಲಾಯಿಸಿಕೊಂಡು ಬರುತ್ತಿದ್ದ ನೆಲ್ಯಾಡಿಯಲ್ಲಿ ಹೊಟೇಲ್ ಹೊಂದಿರುವ ಮೆಲ್ಕಾರು ನಿವಾಸಿ ಸಂತೋಷ್ ಎಂಬವರು
ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಲಾರಿ ಚಾಲಕ ತಮಿಳುನಾಡು ನಿವಾಸಿ ಶೀತಲ್ ಮತ್ತು ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಲಾರಿಯ ಚಾಲಕ ಬೆಂಗಳೂರು ಅತ್ತಿಬೆಲೆ ನಿವಾಸಿ ಹೇಮಂತ್ ಗಾಯಗೊಂಡಿದ್ದು, ಇವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ

ಜಾಹೀರಾತು
ಜಾಹೀರಾತು
ಜಾಹೀರಾತು