ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶ ಪ್ರಯುಕ್ತ ಪೂರ್ವ ತಯಾರಿ ಅಂಗವಾಗಿ ಡಿ.12 ರಂದು ಮಾತೃ ಸಮಾವೇಶ – ಕಹಳೆ ನ್ಯೂಸ್
ಬಂಟ್ವಾಳ : ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶ ಪ್ರಯುಕ್ತ ಪೂರ್ವ ತಯಾರಿ ಅಂಗವಾಗಿ ಭಾನುವಾರ ಡಿಸೆಂಬರ್ 12ರಂದು ಮಾತೃಸಮಾವೇಶ ನಡೆಯಲಿದೆ.
ಕಳ್ಳಿಗೆ, ತುಂಬೆ, ಬಿ.ಮೂಡ ಮತ್ತು ನಡು ಗ್ರಾಮ ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಮಾತೆಯರು ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ಪ್ರತಿ ಗ್ರಾಮಗಳಲ್ಲಿ ಮಾತೆಯರು ಮನೆ ಮನೆ ಸಂಪರ್ಕಿಸಿ ಸಮಾವೇಶದ ಯಶಸ್ಸಿಗಾಗಿ ದುಡಿಯುತ್ತಿದ್ದಾರೆ.
ದೇವಂದಬೆಟ್ಟು ದೇವಸ್ಥಾನದ ಹಿಂಭಾಗದ ಮೈದಾನದಲ್ಲಿ ಸಮಾವೇಶವನ್ನು ನಡೆಸುವುದಾಗಿ ನಿರ್ಧರಿಸಲಾಗಿದ್ದು, ಬುಧವಾರ ಅಂತಿಮ ತಯಾರಿಯ ಬಗ್ಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಪ್ರಮುಖರ ತುರ್ತು ಸಭೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ವ್ಯವಸ್ಥಾಪನಾ ಸಮಿತಿ ಕಾರ್ಯದರ್ಶಿ ದಾಮೋದರ ನೆತ್ತರಕೆರೆ, ಬ್ರಹ್ಮಕಲಶೋತ್ಸವದಲ್ಲಿ ಮಹಿಳೆಯರ ಪಾತ್ರ ಮತ್ತು ಮಾತೆಯರ ಸಕ್ರಿಯ ಭಾಗವಹಿಸುವಿಕೆಯಿಂದ ಯಾವ ರೀತಿಯಲ್ಲಿ ಯಶಸ್ವಿಯಾಗಿ ಕಾರ್ಯಕ್ರಮದ ನಿರ್ವಹಣೆ ಮಾಡಲು ಸಾಧ್ಯ ಎನ್ನುವ ಬಗ್ಗೆ ಮಾಹಿತಿಯನ್ನು ನೀಡಿ, ಮಹಿಳೆಯರನ್ನು ಸಂಪೂರ್ಣವಾಗಿ ತೊಡಗಿಸುವ ಉದ್ದೇಶದಿಂದ ಮಾತೃ ಸಮಾವೇಶ ಆಯೋಜಿಸಲಾಗಿದೆ ಎಂದರು.
ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಮೇಶ್ ಉಪಾಧ್ಯಾಯ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸದಾನಂದ ಶೆಟ್ಟಿ ರಂಗೋಲಿ, ಸಂಚಾಲಕ ತೇವು ತಾರನಾಥ ಕೊಟ್ಟಾರಿ, ಗೌರವಾಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಗಣೇಶ್ ಸುವರ್ಣ ತುಂಬೆ, ಕೋಶಾಧಿಕಾರಿ ಕವಿರಾಜ್ ಚಂದ್ರಿಗೆ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪುರುಷೋತ್ತಮ ಕೊಟ್ಟಾರಿ ಮಾಡಂಗೆ, ಸತೀಶ್ ಶೆಟ್ಟಿ ಮೊಡಂಕಾಪು, ದಿವಾಕರ ಶೆಟ್ಟಿ ಕುಪ್ಪಿಲ, ಅರ್ಚಕ ರಾಧಾಕೃಷ್ಣ ಕಡಂಬಳಿತ್ತಾಯ, ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷ ಜ್ಯೋತೀಂದ್ರ ಶೆಟ್ಟಿ ಮುಂಡಾಜೆಗುತ್ತು, ಸತೀಶ್ ಪಲ್ಲಮಜಲು, ದೇವಿಪ್ರಸಾದ್ ಎಂ ದೇವಂದಬೆಟ್ಟು, ವಿಶ್ವನಾಥ್ ಕುಲಾಲ್, ಪೂವಪ್ಪ ವಳವೂರು ಮತ್ತಿತರರು ಉಪಸ್ಥಿತರಿದ್ದರು.