Recent Posts

Tuesday, January 21, 2025
ದಕ್ಷಿಣ ಕನ್ನಡಸುದ್ದಿ

ಮಂಗಳೂರಿನಲ್ಲಿ ಜನರಲ್ ಬಿಪಿನ್ ರಾವತ್ ಸಾವಿಗೆ ಸಂಭ್ರಮಾಚರಿಸಿದ ಪುಂಡರು : 3 ಫೇಸ್‍ಬುಕ್ ಖಾತೆಗಳ ವಿರುದ್ಧ ಪ್ರಕರಣ ದಾಖಲು – ಕಹಳೆ ನ್ಯೂಸ್

ಮಂಗಳೂರು: ರಕ್ಷಣಾ ಪಡೆಗಳ ಮುಖ್ಯಸ್ಥ ಸಿಡಿಎಸ್ ಜನರಲ್ ಬಿಪಿನ್ ರಾವತ್ ಸಾವಿನ ಸಂಭ್ರಮಾಚರಣೆ ಮಾಡಿದ ಆರೋಪದಲ್ಲಿ ಮೂರು ಫೇಸ್‍ಬುಕ್ ಖಾತೆಗಳ ವಿರುದ್ಧ ಪೊಲೀಸರುಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

‘ವಸಂತಕುಮಾರ್ ಟಿ.ಕೆ, ಶ್ರೀನಿವಾಸ ಕಾರ್ಕಳ ಹಾಗೂ ಇನ್ನೊಂದು ಅಪರಿಚಿತ ಫೇಸ್‍ಬುಕ್ ಖಾತೆಯಲ್ಲಿ ಬಿಪಿನ್ ರಾವತ್ ಅವರ ಸಾವಿನ ಬಗ್ಗೆ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್ ಬಗ್ಗೆ ಅವಹೇಳನಕಾರಿ ಪೋಸ್ಟ್‌ಗಳನ್ನು ಹಾಕಲಾಗಿತ್ತು.

ಸುಶಾಂತ್ ಪೂಜಾರಿ ದೂರಿನ್ವಯ ಕಾನೂನು ತಜ್ಞರ ಸಲಹೆ ಪಡೆದು ಕ್ರಮ ಕೈಗೊಳ್ಳಲಾಗುತ್ತಿದ್ದು, ಆರೋಪಿಸಿರುವ ಫೇಸ್‍ಬುಕ್ ಖಾತೆದಾರರಲ್ಲಿ ಒಬ್ಬರು ಬೆಂಗಳೂರಿನವರು, ಮತ್ತೊಬ್ಬರು ಕಾರ್ಕಳದವರಾಗಿದ್ದು, ಇನ್ನೊಂದು ಖಾತೆ ಅಪರಿಚಿತವಾಗಿದೆ. ಸಂಬಂಧಪಟ್ಟವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುವುದು’ ಎಂದು ಪೆÇಲೀಸ್ ಕಮಿಷನರ್ ಎನ್.ಶಶಿಕುಮಾರ್ ಹೇಳಿದ್ದಾರೆ.