Sunday, January 19, 2025
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿಮೂಡಬಿದಿರೆಸುದ್ದಿ

ದ.ಕ ಜಿಲ್ಲೆಯಲ್ಲಿ ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆ, ಗೃಹ ಸಚಿವ ಅರಗ ಜ್ಞಾನೇಂದ್ರರ ಜೊತೆ ದ.ಕ ಜಿಲ್ಲೆಯ ಶಾಸಕರ ನಿಯೋಗದಿಂದ ಚರ್ಚೆ- ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯ ಕಾನೂನು ಸುವ್ಯವಸ್ಥೆಯ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರ ನಿಯೋಗದಿಂದ ಮಾನ್ಯ ಗೃಹ ಸಚಿವರಾದ ಅರಗ ಜ್ಞಾನೇಂದ್ರ ಅವರನ್ನು ಭೇಟಿ ಮಾಡಿ ಚರ್ಚಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಘಟನೆಗಳು ಅಲ್ಲಲ್ಲಿ ನಡೆಯತ್ತಿದ್ದು, ಉಪ್ಪಿನಂಗಡಿಯಲ್ಲಿ ನಡೆದ ಘಟನೆಯನ್ನು ಪ್ರಸ್ತಾಪಿಸಲಾಯಿತು. ಪೋಲೀಸರ ಮೇಲೆ ಹಲ್ಲೆ, ಠಾಣೆಗೆ ಪ್ರವೇಶಿಸಿ ಸಿಬ್ಬಂದಿಗಳ ಮೇಲೆ ದುರ್ವರ್ತನೆ ತೋರಿದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು.

ಇದನ್ನು ಸೂಕ್ತ ರೀತಿಯಲ್ಲಿ ಹತ್ತಿಕ್ಕುವ ಕಾರ್ಯ ಇಲಾಖೆಯಿಂದ ಆಗಬೇಕಿದೆ. ಈ ಬಗ್ಗೆ ಇಲಾಖೆಗೆ ಸೂಕ್ತ ನಿರ್ದೇಶನ ನೀಡುವಂತೆ ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಮಾನ್ಯ ಸಚಿವರಾದ ಎಸ್.ಅಂಗಾರ ಶಾಸಕರುಗಳಾದ ಡಾ.ವೈ ಭರತ್ ಶೆಟ್ಟಿ, ಸಂಜೀವ ಮಠಂದೂರು, ರಾಜೇಶ್ ನಾಯ್ಕ್, ಉಮಾನಾಥ ಕೋಟ್ಯಾನ್, ಹರೀಶ್ ಪೂಂಜ, ಪ್ರತಾಪಸಿಂಹ ನಾಯಕ್ ಮತ್ತಿತ್ತರರು ಉಪಸ್ಥಿತರಿದ್ದರು.