Recent Posts

Sunday, January 19, 2025
ರಾಜ್ಯಸುದ್ದಿ

ಸೈನಿಕರಿಗೆ ನೀಡುವ ಪ್ರಶಸ್ತಿ ಮೊತ್ತ ಐದು ಪಟ್ಟು ಹೆಚ್ಚಳ – ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ – ಕಹಳೆ ನ್ಯೂಸ್

ಸೈನಿಕರಿಗೆ ನೀಡುವ ಪ್ರಶಸ್ತಿ ಮೊತ್ತವನ್ನು ಐದು ಪಟ್ಟು ಹೆಚ್ಚಳ ಮಾಡಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ಧಾರೆ. ಬೆಳಗಾವಿಯಲ್ಲಿ ನಡೆದ ವಿಜಯ್ ದಿವಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು, ಸೈನಿಕರಿಗೆ ನೀಡುವ ಪ್ರಶಸ್ತಿ ಮೊತ್ತವನ್ನು 5 ಪಟ್ಟು ಹೆಚ್ಚಿಸಿ ಘೋಷಿಸಿದ್ದು, ರಾಜ್ಯ ಸರ್ಕಾರ ಶೌರ್ಯ ಪ್ರಶಸ್ತಿ ವಿಜೇತರಿಗೆ ನೀಡುವ ನಗದು ಅನುದಾನವನ್ನು ಇದೀಗ ಐದು ಪಟ್ಟು ಹೆಚ್ಚಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪರಮವೀರ ಚಕ್ರ 25 ಲಕ್ಷದಿಂದ 1.5 ಕೋಟಿ ರೂ. ಗೆ ಹೆಚ್ಚಳ
ಮಹಾವೀರ ಚಕ್ರ 12 ಲಕ್ಷದಿಂದ 1 ಕೋಟಿ ರೂ.ಗೆ ಏರಿಕೆ
ಅಶೋಕ ಚಕ್ರ ಪ್ರಶಸ್ತಿ 25 ಲಕ್ಷದಿಂದ 1.5 ಕೋಟಿ ರೂಗೆ. ಹೆಚ್ಚಳ
ಕೀರ್ತಿಚಕ್ರ ಪ್ರಶಸ್ತಿಗೆ 12 ಲಕ್ಷರೂ.ನಿಂದ 1ಕೋಟಿ ರೂಗೆ ಹೆಚ್ಚಳ
ವೀರ ಚಕ್ರ ಪ್ರಶಸ್ತಿ 8 ಲಕ್ಷದಿಂದ 50 ಲಕ್ಷ ರೂಪಾಯಿಗೆ ಹೆಚ್ಚಳ
ಶೌರ್ಯ ಚಕ್ರ 8 ಲಕ್ಷದಿಂದ 50 ಲಕ್ಷ ರೂಗೆ ಹೆಚ್ಚಳ
ಸೇನಾ ಮೆಡಲ್ 2 ಲಕ್ಷದಿಂದ 15 ಲಕ್ಷ ರೂ. ಗೆ ಹೆಚ್ಚಳ
ಈ ಮೂಲಕ ಸೈನಿಕರಿಗೆ ನೀಡುವ ಪ್ರಶಸ್ತಿ ಮೊತ್ತವನ್ನು ಐದು ಪಟ್ಟು ಹೆಚ್ಚಳ ಮಾಡಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಆದೇಶ ಹೊರಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು