Sunday, January 19, 2025
ಸಂತಾಪಹೆಚ್ಚಿನ ಸುದ್ದಿ

ಸೇನಾ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರಿಗೆ ಇಂದು ಕುಟುಂಬಸ್ಥರು ಹಾಗೂ ಸ್ನೇಹಿತರಿಂದ ಅಂತಿಮ ದರ್ಶನ ಬಳಿಕ ಅಂತ್ಯಕ್ರಿಯೆ -ಕಹಳೆ ನ್ಯೂಸ್

ತಮಿಳುನಾಡಿನ ಕೂನೂರಿನಲ್ಲಿ ನಡೆದ ಸೇನಾ ಹೆಲಿಕಾಪ್ಟರ್ ಪತನ ದುರಂತದಲ್ಲಿ ಬದುಕುಳಿದಿದ್ದ ಏಕೈಕ ಸೇನಾ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬುಧವಾರ ನಿಧನರಾಗಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ಆಸ್ಪತ್ರೆಯಿಂದ ಯಲಹಂಕ ವಾಯುನೆಲೆಗೆ ಕ್ಯಾಪ್ಟನ್ ವರುಣ್ ಸಿಂಗ್ ಪಾರ್ಥಿವ ಶರೀರ ರವಾನೆಯಾಗಿದ್ದು, ಬಳಿಕ ಯಲಹಂಕದಿಂದ ಭೂಪಾಲ್‍ಗೆ ಪಾರ್ಥಿವ ಶರೀರ ರವಾನೆಯಾಗಿದೆ. ಬೆಳಗ್ಗೆ 10 ಗಂಟೆಗೆ ಕಮಾಂಡೋ ಆಸ್ಪತ್ರೆಯಿಂದ ಯಲಹಂಕ ಏರ್ ಬೇಸ್‍ಗೆ ಪಾರ್ಥೀವ ಶರೀರ ತೆಗೆದುಕೊಂಡು ಬಂದು, ಬಳಿಕ ಗೌರವ ನಮನ ಸಲ್ಲಿಸಲಾಯಿತು.

ಇದಾದ ಬಳಿಕ ಯಲಹಂಕದಿಂದ ಭೂಪಾಲ್‍ಗೆ ಪಾರ್ಥಿವ ಶರೀರ ರವಾನೆ ಮಾಡಲಾಯಿತು. ಸರ್ವೀಸ್ ಏರ್‍ಕ್ರಾಫ್ಟ್ ಮೂಲಕ ಪಾರ್ಥಿವ ಶರೀರ ತೆಗೆದುಕೊಂಡು ಅಧಿಕಾರಿಗಳು ತೆರಳಿದ್ದಾರೆ, ಕ್ಯಾಪ್ಟನ್ ವರುಣ್ ಸಿಂಗ್ ಅವರ ಪಾರ್ಥಿವ ಶರೀರ ಮಧ್ಯಾಹ್ನದ ವೇಳೆಗೆ ಭೋಪಾಲ್‍ಗೆ ತಲುಪಲಿದೆ. ಸೇನಾ ಅಧಿಕಾರಿಗಳು ಕುಟುಂಬಸ್ಥರಿಗೆ ಕ್ಯಾಪ್ಟನ್ ವರುಣ್ ಸಿಂಗ್ ಪಾರ್ಥಿವ ಶರೀರವನ್ನು ಹಸ್ತಾಂತರಿಸಲಿದ್ದಾರೆ. ಬಳಿಕ ಕುಟುಂಬಸ್ಥರು ಹಾಗೂ ಸ್ನೇಹಿತರೆಲ್ಲ ಅಂತಿಮ ದರ್ಶನ ಪಡೆಯಲಿದ್ದಾರೆ. ಇದಾದ ಬಳಿಕ ಅಂತ್ಯಕ್ರಿಯೆ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು