Recent Posts

Monday, January 20, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡ ಬರಿಮಾರು ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು – ಕಹಳೆ ನ್ಯೂಸ್

ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಡಳಿತವನ್ನು ಮೆಚ್ಚಿ ಹಾಗೂ ಭಾರತೀಯ ಜನತಾ ಪಾರ್ಟಿಯ ತತ್ವ ಸಿದ್ಧಾಂತ ಹಾಗೂ ಶಾಸಕ ರಾಜೇಶ ನಾಯ್ಕ್ ಅವರ ಅಭಿವೃದ್ಧಿ ಕೆಲಸ ಕಾರ್ಯವನ್ನು ನೋಡಿ, ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ ಅವರ ಸಮ್ಮುಖದಲ್ಲಿ, ಬರಿಮಾರು ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು, ಬಿಸಿರೋಡ್ ಬಿಜೆಪಿ ಕಚೇರಿಯಲ್ಲಿ, ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು


ಈ ಸಂದರ್ಭದಲ್ಲಿ ಕ್ಷೇತ್ರ ಬಿಜೆಪಿ ಕಾರ್ಯದರ್ಶಿಯಾದ ರಮನಾಥ ರಾಯಿ ಕ್ಷೇತ್ರ ಕೋಶಾಧಿಕಾರಿ ಪ್ರಕಾಶ್ ಅಂಚನ್ ಎಸ್ ಸಿ ಮೋರ್ಚಾದ ಕ್ಷೇತ್ರ ಅಧ್ಯಕ್ಷ ಕೇಶವ ದೈಪಲ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕಮಲಾಕ್ಷಿ ಕೆ ಪೂಜಾರಿ ನರಿಕೊಂಬು ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಯಶೋಧರ ಕರ್ಬೆಟ್ಟು ಎಸ್ಸಿ ಮೋರ್ಚಾದ ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಕುದ್ರೆಬೆಟ್ಟು ವಿಶ್ವನಾಥ ಚಂಡ್ತಿಮಾರ್ ಬಾಳ್ತಿಲ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅಶ್ವತ್ ಬರಿಮಾರು ತನಿಯಪ್ಪ ಗೌಡ ಸದಾಶಿವ ಬರಿಮಾರು ಸುಷ್ಮಾ , ಪುಷ್ಪಾ, ಜಯಾನಂದ ವಸಂತ ಚಂದ್ರಹಾಸ ಚೇತನ್ ದುರ್ಗಾ ಪ್ರಸಾದ್ ಮುಂತಾದವರು ಉಪಸ್ಥಿತರಿದ್ದರು .