Recent Posts

Monday, January 20, 2025
ದಕ್ಷಿಣ ಕನ್ನಡಸುದ್ದಿ

ಮಂಗಳೂರು : ಮೆಡಿಕಲ್ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ – ಕಹಳೆ ನ್ಯೂಸ್

ಮಂಗಳೂರು: ಎಂ.ಬಿ.ಬಿ.ಎಸ್ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರು ಹೊರವಲಯದ ಕುತ್ತಾರು ಎಂಬಲ್ಲಿನ ಸಿಲಿಕಾನಿಯಾ ಅಪಾರ್ಟ್‍ಮೆಂಟ್ ನಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮೂಲತಃ ಬೀದರ್ ನಿವಾಸಿಯಾಗಿರುವ ಪ್ರಸ್ತುತ ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜಿನಲ್ಲಿ ಎಂ.ಬಿ.ಬಿ.ಎಸ್ ವ್ಯಾಸಂಗ ಮಾಡುತ್ತಿದ್ದ ವೈಶಾಲಿ ಗಾಯಕ್ ವಾಡ್ (25) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ತನ್ನ ಸಹಪಾಠಿಯ ಜೊತೆ ವಾಸವಾಗಿದ್ದ, ವೈಶಾಲಿ ಶನಿವಾರದಂದು ಪ್ರತ್ಯೇಕ ಕೊಠಡಿಯಲ್ಲಿ ಮಲಗಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ರವಿವಾರದಂದು ವೈಶಾಲಿ ರೂಂನಿಂದ ಹೊರಬರದಿದ್ದ ಸಂದರ್ಭದಲ್ಲಿ ಸಹಪಾಠಿ ವಿದ್ಯಾರ್ಥಿನಿ ಗಾಬರಿಗೊಂಡು ಪರಿಶೀಲಿಸಿದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ.
ಪ್ರೇಮ ಪ್ರಕರಣ ಸಂಬಂಧ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಆತ್ಮಹತ್ಯೆ ಹಿನ್ನೆಲೆ ಆಕೆಯ ಗೆಳೆಯ ಕೇರಳದ ಪಾಲಕ್ಕಾಡ್ ನಿವಾಸಿ ಸುಜೀಶ್(24) ಎಂಬಾತನನ್ನು ಪೆÇಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಉಳ್ಳಾಲ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.