Recent Posts

Sunday, January 19, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿ ಬೊಂಡಾಲ ಮಹಾಗಣಪತಿ ದೇವಸ್ಥಾನ- ಕಹಳೆ ನ್ಯೂಸ್

ಪುತ್ತೂರು: ಶ್ರೀ ಮಹಾಗಣಪತಿ ದೇವಸ್ಥಾನ ಬೊಂಡಾಲದಲ್ಲಿ ಡಿ.22 ರಿಂದ ಡಿ.26ವರೆಗೆ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ, ನಾಗಪ್ರತಿಷ್ಠೆ ಹಾಗೂ ಅಷ್ಟೋತ್ತರ ಶತ(108) ನಾಳಿಕೇರ ಗಣಪತಿ ಯಾಗ ನಡೆಯಲಿದೆ. ಮಾದಕಟ್ಟೆ ಈಶ್ವರ ಭಟ್‌ರವರ ಉಪಸ್ಥಿತಿಯಲ್ಲಿ, ವೇದಮೂರ್ತಿ ಮುನಿಯೂರು ಕುಮಾರ ಸುಬ್ರಹ್ಮಣ್ಯ ಭಟ್ಟರ ದಿವ್ಯಹಸ್ತದಲ್ಲಿ ಬ್ರಹ್ಮಕಲಶೋತ್ಸವ ನೆರವೇರಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

 
ಸುಮಾರು ಒಂದುವರೆ ಕೋಟಿ ವೆಚ್ಚದಲ್ಲಿ ನೂತನ ಶಿಲಾಮಯ ಗರ್ಭಗುಡಿಯಲ್ಲಿ ಶ್ರೀ ಮಹಾಗಣಪತಿ ದೇವರ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ನಡೆಯಲಿದೆ. ಡಿ.22 ರಂದು ಬ್ರಹ್ಮಕಲಶಾಭಿಷೇಕ ಅಂಗವಾಗಿ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರ ದಿಂದ ಸಂಜೆ 4 ಗಂಟೆಗೆ ಹಸಿರುಹೊರೆ ಕಾಣಿಕೆ ಮೆರವಣಿಗೆ ಹೊರಡಲಿದೆ. ಸಂಜೆ 5.30ಕ್ಕೆ ಉಗ್ರಾಣ ಮುಹೂರ್ತ ನಂತರ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.
ಡಿ.26 ರಂದು ಬೆಳಿಗ್ಗೆ 10ಗಂಟೆ 9 ನಿಮಿಷಗಳ ಕುಂಭ ಲಗ್ನದಲ್ಲಿ ಮಹಾಗಣಪತಿ ದೇವರ ಬಿಂಬ ಪ್ರತಿಷ್ಠೆ , ನಾಗಪ್ರತಿಷ್ಠೆ ,ನಿದ್ರಾಕಲಶಾಭಿಷೇಕ, ಪ್ರಾಣ ಪ್ರತಿಷ್ಠೆ, ಪ್ರತಿಷ್ಠಾ ಪೂಜೆ, ಅಷ್ಟೋತ್ತರ ಶತ(108) ನಾಳಿಕೇರ ಗಣಪತಿ ಯಾಗ, ಪಂಚವಿAಶತಿ ದ್ರವ್ಯಾತ್ಮಕ ಪರಿಕಲಶಾಭಿಷೇಕ, ಬ್ರಹ್ಮಕಲಶಾಭಿಷೇಕ ನಡೆಯಲಿದೆ
ಪ್ರತಿದಿನ ಸಂಜೆ 7 ಗಂಟೆಯಿAದ ಧಾರ್ಮಿಕ ಸಭಾ ಕಾರ್ಯಕ್ರಮ, ಪ್ರತಿದಿನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು