Recent Posts

Monday, January 20, 2025
ದಕ್ಷಿಣ ಕನ್ನಡಸುದ್ದಿ

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ: ಆಂಬುಲೆನ್ಸ್ ನಲ್ಲೇ ಕೋರ್ಟ್‍ಗೆ ಬಂದು ಶರಣಾದ ವಕೀಲ ರಾಜೇಶ್- ಕಹಳೆ ನ್ಯೂಸ್

ಮಂಗಳೂರು; ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಆರೋಪಿ ವಕೀಲ ಕೆ. ಎಸ್. ಎನ್. ರಾಜೇಶ್ ಮಂಗಳೂರಿನ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ವಕೀಲ ರಾಜೇಶ್ ಕಚೇರಿಯಲ್ಲಿ ಇಂಟರ್ನ್‍ಶಿಪ್‍ಗೆ ಬಂದಿದ್ದ ಕಾನೂನು ಕಾಲೇಜಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಆರೋಪ ಕೇಳಿ ಬಂದಿತ್ತು. ಜೊತೆಗೆ ದೂರು ನೀಡದಂತೆ ಬೆದರಿಕೆ ಹಾಕಿದ್ದ ಎಂದು ಸಂತ್ರಸ್ತೆ ವಿದ್ಯಾರ್ಥಿನಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಆದರೆ, ಅದಾಗಲೇ ವಕೀಲ ರಾಜೇಶ್ ನಾಪತ್ತೆಯಾಗಿದ್ದರು. ವಕೀಲ ರಾಜೇಶ್ ಬ್ಯಾಂಕ್ ಖಾತೆ ಸ್ಥಗಿತಗೊಳಿಸಿ, ಲುಕ್‍ಔಟ್ ನೋಟೀಸ್ ಜಾರಿಗೊಳಿಸಲಾಗಿತ್ತು. ಆರೋಪಿ ವಕೀಲರಿಗೆ ಸಹಕಾರ ನೀಡಿದ ಕಾರಣಕ್ಕೆ ವಕೀಲನ ಪತ್ನಿ ಸೇರಿದಂತೆ ಹಲವರನ್ನು ಬಂಧಿಸಲ್ಪಟ್ಟಿದ್ದರೂ ಆರೋಪಿ ಪತ್ತೆಯಾಗಿರಲಿಲ್ಲ. ಇದೀಗ ಆರೋಪಿ ಘಟನೆ ನಡೆದ ತಿಂಗಳುಗಳ ಬಳಿಕ ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ.Full Video : ಕಾರಿಂಜದಲ್ಲಿ ಕೇಸರಿ ಕಹಳೆ ; ಜಿಲ್ಲೆಯ ಸಂತರಿಂದ ನ್ಯಾಯಕ್ಕಾಗಿ ಒತ್ತಾಯ

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೊಲೀಸರಿಂದ ತಲೆಮರೆಸಿಕೊಂಡಿದ್ದ ಆರೋಪಿ ರಾಜೇಶ್ ಭಟ್ ಎರಡು ತಿಂಗಳ ಬಳಿಕ ಮಂಗಳೂರಿನ ಮೂರನೇ ಜೆಎಂಎಫ್‍ಸಿ ಕೋರ್ಟ್‍ಗೆ ಶರಣಾಗಿದ್ದಾರೆ.

ಮೂಲಗಳ ಪ್ರಕಾರ ವಕೀಲ ರಾಜೇಶ್ ಭಟ್ ಅಂಬುಲೆನ್ಸ್‌ನಲ್ಲಿಯೇ ನ್ಯಾಯಾಲಯಕ್ಕೆ ಶರಣಾಗಿದ್ದ ಎಂಬ ಮಾಹಿತಿಯಿದೆ. ಆದರೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಬಳಿಕ ಪೊಲೀಸ್ ವಾಹನದಲ್ಲೇ ಆರೋಪಿಯನ್ನು ಕರೆದೊಯ್ಯಲಾಯಿತು. ಈ ನಡುವೆ ಇಂದು ಪ್ರಧಾನ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದ್ದು ಪೊಲೀಸರು ಆರೋಪಿ ವಕೀಲ ರಾಜೇಶ್ ಭಟ್‌ನನ್ನು ಪೊಲೀಸ್ ಕಸ್ಟಡಿಗೆ ಕೇಳುವ ನಿರ್ಧಾರ ಮಾಡಿದ್ದಾರೆ. ಸಂತ್ರಸ್ಥ ಯುವತಿ ವಕೀಲ ರಾಜೇಶ್ ಭಟ್ ವಿರುದ್ದ ಸಾಕಷ್ಟು ಆರೋಪ ಮಾಡಿರುವುದರಿಂದ ಆ ಎಲ್ಲದರ ಬಗ್ಗೆಯೂ ಪೊಲೀಸ್ ವಿಚಾರಣೆ ನಡೆಯಲಿದೆ.

ರಾಜೇಶ್ ಆರೋಗ್ಯ ತಪಾಸಣೆ ನಡೆಸುವಂತೆ ಜೈಲಾಧಿಕಾರಿಗಳಿಗೆ ನ್ಯಾಯಾಲಯ ಸೂಚಿಸಿದ್ದರಿಂದ, ಮಂಗಳೂರಿನ ವೆನ್ ಲಾಕ್ ಜಿಲ್ಲಾಸ್ಪತ್ರೆಯಲ್ಲಿ ರಾಜೇಶ್ ಭಟ್ ಮೆಡಿಕಲ್ ಚೆಕಪ್ ನಡೆಸಲಾಗಿದೆ. ಮೆಡಿಕಲ್ ಟೆಸ್ಟ್ ಬಳಿಕ ಕಾರಾಗೃಹಕ್ಕೆ ಪೊಲೀಸರು ಕರೆದೊಯ್ದಿದ್ದು, ಮಂಗಳವಾರ ಪ್ರಧಾನ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ.