Tuesday, January 21, 2025
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಸಂಚಾರಿ ಮಾರಾಟ ಮಳಿಗೆ ವಾಹನ ಹಸ್ತಾಂತರ- ಕಹಳೆ ನ್ಯೂಸ್

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಸಿರಿ ಗ್ರಾಮದ್ಯೋಗ ಸಂಸ್ಥೆಯಿ0ದ ಈಗಾಗ್ಲೆ ಲಕ್ಷಾಂತರ ಮಹಿಳೆಯರು ಸ್ವಾವಲಂಬಿ ಜೀವನ ನಡೆಸುತ್ತಿದ್ದು, ಇದಕ್ಕೆ ಬ್ಯಾಂಕ್ ಆಫ್ ಬರೋಡಾ ಆಡಳಿತ ನಿರ್ದೇಶಕರು ಇನ್ನಷ್ಟು ಬಲ ತುಂಬಿದ್ದಾರೆ.

ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ‘ಸಂಚಾರಿ ಮಾರಾಟ ಮಳಿಗೆ ವಾಹನ’ವನ್ನು ಬ್ಯಾಂಕ್ ಆಫ್ ಬರೋಡಾ ಆಡಳಿತ ನಿರ್ದೇಶಕ ಅಜಯ ಕೆ.ಖುರಾನರವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಹಸ್ತಾಂತರಿಸಿದ್ದಾರೆ .

ಜಾಹೀರಾತು
ಜಾಹೀರಾತು
ಜಾಹೀರಾತು

ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ಸೋಮವಾರ ಕಾರ್ಯಕ್ರಮ ನಡೆದಿದ್ದು, ಬ್ಯಾಂಕ್ ಆಫ್ ಬರೋಡದ ಮಹಾ ಪ್ರಬಂಧಕಿ ಆರ್. ಗಾಯತ್ರಿ ಡಿಜಿಎಂ ಆರ್ ಗೋಪಾಲಕೃಷ್ಣ , ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ, ನಿರ್ದೇಶಕ ಡಾ.ಎಲ್.ಎಚ್ ಮಂಜುನಾಥ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅನಿಲ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು