Sunday, November 24, 2024
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಡಿಸೆಂಬರ್ 31 ರ ರಾತ್ರಿ ಹೊಸ ವರ್ಷಾಚರಣೆಯ ನೆಪದಲ್ಲಿ ಆಗುವ ಅಯೋಗ್ಯ ಆಚರಣೆ ಮತ್ತು ಸಮಾಜದ ಸ್ವಾಸ್ಥ್ಯ ಕಾಪಾಡಲು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬಂಟ್ವಾಳ ತಹಶೀಲ್ದಾರ್ ಗೆ ಮನವಿ- ಕಹಳೆ ನ್ಯೂಸ್

ಬಂಟ್ವಾಳ : ಹೊಸ ವರ್ಷಾಚರಣೆಯ ನೆಪದಲ್ಲಿ ಡಿಸೆಂಬರ್ 31 ರ ರಾತ್ರಿ ನಡೆಯುವ ಹೊಸ ವರ್ಷಾಚರಣೆ ಮತ್ತು ಪಾರ್ಟಿಗಳನ್ನು ನಿಷೇಧಿಸಲು ಬಂಟ್ವಾಳ ತಹಶೀಲ್ದಾರಾದ ರಶ್ಮಿ ಇವರಿಗೆ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮನವಿಯನ್ನು ನೀಡಲಾಯಿತು.


ದೇಶದಾದ್ಯಂತ ಹೆಚ್ಚುತ್ತಿರುವ ಪಾಶ್ಚಾತ್ಯ ಕೆಟ್ಟ ರೂಢಿಗಳ ಅಂಧಾನುಕರಣೆಯಿ0ದಾಗಿ ಹೊಸ ವರ್ಷದ ಹೆಸರಿನಲ್ಲಿ ಡಿಸೆಂಬರ್ 31 ರ ಮಧ್ಯರಾತ್ರಿ ಧೂಮಪಾನ, ಮದ್ಯಪಾನ, ಅಮಲು ಪದಾರ್ಥಗಳ ಸೇವನೆ, ಪಾರ್ಟಿಗಳ ಆಯೋಜನೆ ಮಾಡುವುದು ಹೆಚ್ಚಾಗಿರುತ್ತದೆ. ಮತ್ತು ಈ ರಾತ್ರಿ ಮದ್ಯಪಾನ ಮಾಡಿ ಅತಿವೇಗದಿಂದ ವಾಹನಗಳನ್ನು ಓಡಿಸುವುದು ಹೆಚ್ಚಾಗಿದ್ದು, ಇವರಲ್ಲಿ ಸಣ್ಣವಯಸ್ಸಿನ ಯುವಕರು, ಯುವತಿಯರು ಮತ್ತು ಮಹಿಳೆಯರು ಸಹ ಇರುತ್ತಾರೆ. ಇದಲ್ಲದೇ ಇಂತಹ ಸಮಯದಲ್ಲಿ ಅನೇಕ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ, ಅತ್ಯಾಚಾರ ಮುಂತಾದ ಘಟನೆಗಳು ನಡೆಯುತ್ತಿದೆ. ಅಲ್ಲದೆ, ಕೊರೋನಾ ಮಹಾಮಾರಿಯು 3ನೇ ಅಲೆ ಬರುವ ಸಾಧ್ಯತೆಯು ಇದ್ದು, ಹೀಗಿರುವಾಗ ಡಿಸೆಂಬರ್ 31 ರಂದು ಆಚರಿಸಲಾಗುವ ಪಾರ್ಟಿಯಿಂದ ಕೊರೋನಾದ ಸೊಂಕು ಹೆಚ್ಚು ಪ್ರಮಾಣದಲ್ಲಿ ಹರಡುವ ಸಾಧ್ಯತೆ ಇದೆ. ಈ ಸಮಯದಲ್ಲಿ ಸಾರ್ವಜನಿಕರ ಆರೋಗ್ಯವನ್ನು ಅಪಾಯಕ್ಕೀಡು ಮಾಡುವುದು ಯೋಗ್ಯವಲ್ಲ. ಆದ್ದರಿಂದ ಡಿಸೆಂಬರ್ 31 ರಾತ್ರಿ ಹೊಸ ವರ್ಷಾಚರಣೆಯನ್ನು ಪೂರ್ಣವಾಗಿ ನಿಷೇಧಿಸಬೇಕು. ಇದಲ್ಲದೇ 31 ಡಿಸೆಂಬರ್‌ನ0ದು ನಗರದಲ್ಲಿರುವ ಕೋಟೆಗಳು, ಪ್ರವಾಸಿತಾಣಗಳು, ಐತಿಹಾಸಿಕ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಹಾಗೂ ಮದ್ಯ ಸೇವನೆಯನ್ನು ಮಾಡುವುದು ಪಾರ್ಟಿಗಳನ್ನು ಮಾಡುವುದರ ಮೇಲೆ ನಿಷೇಧ ಹೇರುವಂತೆ ಆದೇಶವನ್ನು ನೀಡಬೇಕು. ಎಂದು ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಚೇತನ ವಿಟ್ಲ, ಪಾಲಕ್ಷ ಸಜೀಪ, ನಾಗೇಶ ಬಂಟ್ವಾಳ, ಯಾದೇಶ ಬೆಂಜನ ಪದವು, ಜಯಕುಮಾರ್ ಮಂಜಲ್ಪಾದೆ, ರಾಧಾಕೃಷ್ಣ ಪೆಲಟ್ಟಕಟ್ಟೆ, ಅಜಿತ್, ಕಿರಣ್, ಸಂಕೇಶ, ಸುರೇಶ ಬಿಸಿರೋಡ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು