Sunday, November 24, 2024
ದಕ್ಷಿಣ ಕನ್ನಡಪುತ್ತೂರುಸುದ್ದಿ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಕಾರ್ಯಾಗಾರ ‘ಪ್ರೇರಣಾ’-ಉದ್ಘಾಟನೆ -ಕಹಳೆ ನ್ಯೂಸ್

ಸಾಧನೆಯ ಹಾದಿ ಸುಗಮವಲ್ಲ. ಛಲವಿದ್ದವರು ಮಾತ್ರ ಆ ಹಾದಿಯಲ್ಲಿ ಸಾಗಲು ಸಾಧ್ಯ. ಮರಳಿ ಯತ್ನವ ಮಾಡು ಎಂಬ ಮಾತಿನಂತೆ ನಿರಂತರ ಪ್ರಯತ್ನದಿಂದ ಮಾತ್ರ ಯಶಸ್ಸು ಸಿಗಬಲ್ಲದು ಎಂದು ರಾಮಕೃಷ್ಣ ಪ್ರೌಢಶಾಲೆಯ ಮುಖ್ಯಶಿಕ್ಷಕಿಯಾದ ಶ್ರೀಮತಿ ಜಯಲಕ್ಷ್ಮಿ ಹೇಳಿದರು.

ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಎರಡು ದಿನಗಳ ವ್ಯಕ್ತಿತ್ವ ವಿಕಸನ ಕಾರ್ಯಾಗಾರ “ಪ್ರೇರಣಾ” ವನ್ನು ಉದ್ಘಾಟಿಸಿ ಮಾತನಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಇಂದಿನ ಯುವ ಪೀಳಿಗೆಗೆ ಮನಸ್ಸನ್ನು ದೃಢಗೊಳಿಸುವುದರ ಜೊತೆಗೆ ಸದೃಢ ಭವಿಷ್ಯದ ನಿರ್ಮಾಣಕ್ಕಾಗಿ ಇಂತಹ ಕಾರ್ಯಾಗಾರದ ಅವಶ್ಯಕತೆ ಇದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಕಾಂಶ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇದರ ಮ್ಯಾನೇಜಿಂಗ್ ಟ್ರಸ್ಟಿ ಮತ್ತು ವಿವೇಕಾನಂದ ಪದವಿ ಕಾಲೇಜಿನ ಭೌತಶಾಸ್ತç ವಿಭಾಗದ ಅಸಿಸ್‌ಟೆಂಟ್ ಪ್ರೊಫೆಸರ್ ಆದ ಡಾ.ಶ್ರೀಶ ಭಟ್ ಇವರು ಭಾಗಿಯಾಗಿದ್ದರು. ಬಿಳಿಕ ಮಾತನಾಡುತ್ತಾ “ವಿದ್ಯಾರ್ಥಿಗಳಲ್ಲಿ ಚಿಂತನಶೀಲತೆಯನ್ನು ಬೆಳೆಸಿ,ಸೃಜನಶೀಲ ಅಭಿವ್ಯಕ್ತಿ ಮತ್ತು ಜ್ಞಾನವನ್ನು ಜಾಗೃತಗೊಳಿಸುವಲ್ಲಿ ಶಿಕ್ಷಕರು ಪ್ರಮುಖ ಪಾತ್ರವಹಿಸುತ್ತಾರೆ.ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಎದುರಾಗುವ ಎಲ್ಲಾ ರೀತಿಯ ಸವಾಲುಗಳನ್ನು ಎದುರಿಸಲು ಬೇಕಾದ ಸಾಮರ್ಥ್ಯವನ್ನು ಪುನಶ್ಚೇತನಗೊಳಿಸುವುದೇ ಈ ಕಾರ್ಯಾಗಾರದ ಪ್ರಮುಖ ಉದ್ದೇಶ ”ಎಂದು ಹೇಳಿದರು.

ಕರ‍್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ನರೇಂದ್ರ ಪ.ಪೂ.ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಕಾಂತ ಕೊಳತ್ತಾಯ ಇವರು ಮಾತನಾಡಿ” ಬದುಕಿಗೊಂದು ದಿಕ್ಕು ಮತ್ತು ಆ ದಿಕ್ಕಿನಲ್ಲಿ ಸಾಗಬೇಕಾದ ದಾರಿಯ ಅರಿವನ್ನು ಇಂದಿನ ಯುವಪೀಳಿಗೆಯಲ್ಲಿ ಮೂಡಿಸುವ ಕೆಲಸವನ್ನು ನಮ್ಮೆಲ್ಲಾ ಸಂಸ್ಥೆಗಳು ಮಾಡುತ್ತಿದೆ.ಅದಕ್ಕೆ ಪೂರಕವಾದ ಎಲ್ಲಾ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು ತಮ್ಮ ಜೀವನದಲಿ  ಅಳವಡಿಸಿ ” ಎಂದು ಹೇಳಿದರು.

ಈ ಸಮಾರಂಭದಲ್ಲಿ ನರೇಂದ್ರ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್‌ರವರು ಸ್ವಾಗತಿಸಿ,ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿ ನಾಯಕನಾದ ಸಚಿತ್ ವಂದಿಸಿದರು. ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಹೇಮಾಶ್ರೀ ಕರ‍್ಯಕ್ರಮವನ್ನು ನಿರೂಪಿಸಿದರು.