Recent Posts

Saturday, September 21, 2024
ದಕ್ಷಿಣ ಕನ್ನಡಸುದ್ದಿ

ಅಲ್ಪಸಂಖ್ಯಾತ ಅಭಿವೃದ್ಧಿ ಇಲಾಖೆಯಡಿ 2 ಕೋಟಿ ವೆಚ್ಚದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ವೇದವ್ಯಾಸ್ ಕಾಮತ್ – ಕಹಳೆ ನ್ಯೂಸ್

ಮಂಗಳೂರು : ಮಹಾನಗರ ಪಾಲಿಕೆಯ ಕಸಬಾ ಬಳಿ ಅಲ್ಪಸಂಖ್ಯಾತ ಅಭಿವೃದ್ಧಿ ಇಲಾಖೆಯಡಿ 2 ಕೋಟಿ ವೆಚ್ಚದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಶಾಸಕರು, ಕಸಬಾ ಬೆಂಗ್ರೆಯಲ್ಲಿ ಕರ್ನಾಟಕ ರಾಜ್ಯ ಸರಕಾರದ ಅಲ್ಪಸಂಖ್ಯಾತ ಅಭಿವೃದ್ಧಿ ಇಲಾಖೆಯಿಂದ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ನಿರ್ಮಾಣಕ್ಕಾಗಿ 2 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. ಈ ಭಾಗದ ಮಹಿಳೆಯಿಗೊ ಸ್ವಾವಲಂಬನೆಯ ದೃಷ್ಟಿಯಿಂದ ತರಬೇತಿ ಕೇಂದ್ರವು ಕಾರ್ಯ ನಿರ್ವಹಿಸಲಿದೆ. ಕಸಬಾ ಬೆಂಗ್ರೆಯಲ್ಲಿ ನಿರ್ಮಾಣವಾಗುವ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರದಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುತ್ತದೆ. ಆ ಮೂಲಕ ಹೆಚ್ಚಿನ ಪ್ರೋತ್ಸಾಹ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಮುಡಾ ಅಧ್ಯಕ್ಷ ರವಿಶಂಕರ ಮಿಜಾರ್ , ಪಾಲಿಕೆ ಸದಸ್ಯ ಮುನೀಬ್ ಬೆಂಗ್ರೆ , ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ ಮೀರಾ ಕರ್ಕೇರ , ಕೇಶವ ಕರ್ಕೇರ , ಸಲೀಂ ಬೆಂಗ್ರೆ, ಶಶಿಕುಮಾರ್ , ಮೋಹನ್ ಬೆಂಗ್ರೆ , ಅಜಿತ್ ಬೆಂಗ್ರೆ , ಸುರೇಂದ್ರ ಪಾಂಗಳ , ಗಂಗಾಧರ ಧನಂಜಯ ಪುತ್ರನ್ , ಸಾಲ್ಯಾನ್ , ವಸಂತ್ ಜೆ ಪೂಜಾರಿ, ಹೇಮಚಂದ್ರ , ಲೋಕೇಶ್ ಬೆಂಗ್ರೆ , ಚೇತನ್ ಬೆಂಗ್ರೆ , ಮತ್ತಿತ್ತರರುಉಪಸ್ಥಿತರಿದ್ದರು.

ಜಾಹೀರಾತು