Recent Posts

Saturday, September 21, 2024
ಬೆಂಗಳೂರುಸಂತಾಪಸುದ್ದಿ

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆ.ವಿ. ರಾಜು ವಿಧಿವಶ- ಕಹಳೆ ನ್ಯೂಸ್

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆ.ವಿ. ರಾಜು ಅನಾರೋಗ್ಯದಿಂದ ವಿಧಿವಶರಾಗಿದ್ದು, ಸ್ಯಾಂಡಲ್ ವುಡ್ ಗೆ ಮತ್ತೊಂದು ಆಘಾತವುಂಟಾಗಿದೆ.

ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೆ.ವಿ. ರಾಜು, ಬೆಂಗಳೂರಿನ ರಾಜಾಜಿನಗರ ನಿವಾಸದಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇಂದ್ರಜಿತ್, ಯುದ್ಧಕಾಂಡ, ಬೆಳ್ಳಿ ಮೋಡ, ಹುಲಿಯಾ, ಬೆಳ್ಳಿ ಕಾಲುಂಗುರ, ಸಂಗ್ರಾಮ ಸೇರಿದಂತೆ ಹಲವು ಹಿಟ್ ಚಿತ್ರಗಳನ್ನು ನಿರ್ದೇಶನ ಮಾಡಿದ್ದರು.
ರಾಜಾಜಿನಗರ ನಿವಾಸದಲ್ಲಿಯೇ ಕೆ.ವಿ. ರಾಜು ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದ್ದು, ಸಂಜೆ ಹರಿಶ್ಚಂದ್ರ ಘಾಟ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಜಾಹೀರಾತು