Recent Posts

Sunday, January 19, 2025
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘಕ್ಕೆ 2020-21ನೇ ಸಾಲಿನ ದ. ಕ ಜಿಲ್ಲೆಯ ಅತ್ಯುತಮ ಮಹಿಳಾ ಸಹಕಾರಿ ಸಂಘ ಪ್ರಶಸ್ತಿ – ಕಹಳೆ ನ್ಯೂಸ್

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘವು 2020-21ನೇ ಸಾಲಿನ ದ. ಕ ಜಿಲ್ಲೆಯ ಅತ್ಯುತಮ ಮಹಿಳಾ ಸಹಕಾರಿ ಸಂಘ ಪ್ರಶಸ್ತಿ ಪಡೆದುಕೊಂಡಿದ್ದು, ಸಂಘವು ಸತತವಾಗಿ ಈ ಪ್ರಶಸ್ತಿಗೆ ಭಾಜನವಾಗುತ್ತಿರುವುದು ಹಳ್ಳಿಯ ಮಹಿಳೆಯರ ಈ ಸಾಧನೆ ಹೆಮ್ಮೆಯ ವಿಷಯವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರಿನ ಕುಲಶೇಖರದ ಕೊರ್ಡೆಲ್ ಹಾಲ್ ನಲ್ಲಿ ನಡೆದ ಒಕ್ಕೂಟದ 35ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ದ. ಕ ಹಾಲು ಒಕ್ಕೂಟದ ಅಧ್ಯಕ್ಷರಾದ ರವಿರಾಜ ಹೆಗ್ಡೆ, ಉಪಾಧ್ಯಕ್ಷರಾದ ಪ್ರಕಾಶ್ ಚಂದ್ರ ಶೆಟ್ಟಿ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಎಸ್ ಟಿ ಸುರೇಶ್ ಹಾಗೂ ಮಹಿಳಾ ಸಂಘದ ಪರವಾಗಿ ಸಂಘದ ಅಧ್ಯಕ್ಷರಾದ ಮಮತ ಕೆ ಗೌಡ, ನಿರ್ದೇಶಕರಾದ ಧರ್ಮಾವತಿ ಪರಪ್ಪಾದೆ,ರಾಜೇಶ್ವರಿ ಕಬಿಲಾಲಿ ಹಾಗೂ ಸಿಬ್ಬಂದಿ ಸತೀಶ್ ಕೆ ಗೌಡ ಉಪಸ್ಥಿತರಿದ್ದು, ಪ್ರಶಸ್ತಿ ಪಡೆದು ಕೊಂಡರು.