ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿಜ್ಞಾನ ಹಾಗೂ ವಾಣಿಜ್ಯ ವಿಜ್ಞಾನ ಕಾಲೇಜು, ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್‍ಮಸ್ ಸಂಭ್ರಮವನ್ನು ಆಚರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಮೂಡುಬಿದಿರೆ ಪುರಸಭೆ ಸದಸ್ಯ ಜೊಸ್ಸಿ ಮೆನೇಜಸ್ ಮಾತನಾಡಿ, ಕ್ರಿಸ್ಮಸ್ ದೀಪಾವಳಿಯಂತೆ ಬೆಳಕಿನ ಹಬ್ಬ. ನಮ್ಮ ಬದುಕು ಇನ್ನೊಬ್ಬರ ಜೀವನಕ್ಕೆ ಬೆಳಕಾಗಬೇಕು ಎನ್ನುವುದನ್ನು ಕ್ರಿಸ್‍ಮಸ್ ಸಾರುತ್ತದೆ. ಪರಸ್ಪರ ಪ್ರೀತಿ, ವಿಶ್ವಾಸ, ಸೇವೆಯೊಂದಿಗೆ ಬದುಕುವ ಸಂದೇಶವನ್ನು ಕ್ರಿಸ್ಮಸ್ ನೀಡುತ್ತದೆ. ಮಾನವೀಯ ಮೌಲ್ಯಗಳನ್ನು ಅರಿತು ಸರ್ವರಿಗೂ ಒಳಿತು ಮಾಡಬೇಕೆನ್ನುವುದನ್ನು ಪ್ರತಿಯೊಂದು ಧರ್ಮದ ಸಾರ. ವಿವಿಧ ಹಬ್ಬಗಳನ್ನು ಶಿಕ್ಷಣ ಸಂಸ್ಥೆಯಲ್ಲಿ ಆಚರಿಸುವ ಮೂಲಕ ಎಕ್ಸಲೆಂಟ್ ಸಂಸ್ಥೆ ವಿದ್ಯಾರ್ಥಿಗಳಲ್ಲಿ ಧರ್ಮಗಳ ಬಗ್ಗೆ ಗೌರವ ಮೂಡಿಸುತ್ತಿರುವುದು ಸೌಗತಾರ್ಹ ಎಂದರು.
ಈ ಸಂದರ್ಭದಲ್ಲಿ ಎಕ್ಸಲೆಂಟ್ ಮೂಡುಬಿದಿರೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಕಾಲೇಜಿನ ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಶಾಲೆಯ ಮುಖ್ಯ ಶಿಕ್ಷಕ ಶಿವಪ್ರಸಾದ್ ಭಟ್ ಮತ್ತಿತ್ತರರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ವೆಲೆಂಟೈನಾ ಮಿರಾಂದ ಸ್ವಾಗತಿಸಿ, ವೆನೆಸ್ಸಾ ನೊರನ್ಹಾ ನಿರೂಪಿಸಿದರು. ಬಳಿಕ ಸಂಸ್ಥೆಯ ವಿದ್ಯಾರ್ಥಿಗಳಿಂದ ಕ್ರಿಸ್‍ಮಸ್ ಗೀತೆ ಹಾಗೂ ನೃತ್ಯ ಕಾರ್ಯಕ್ರಮ ನಡೆಯಿತು.