ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ನೈಟ್ ಕಫ್ರ್ಯೂ ಜಾರಿಗೊಳಿಸುವಂತೆ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಚಿವ ಡಾ. ಸುಧಾಕರ್, ಡಿಸೆಂಬರ್ 28 ರಿಂದ ರಾತ್ರಿ 10 ರಿಂದ ಬೆಳಗ್ಗೆ 5 ರ ವರೆಗೆ 10 ದಿನ ನೈಟ್ ಕಫ್ರ್ಯೂ ಜಾರಿಗೊಳಿಸಲಾಗಿದೆ. ಹೊಸ ವರ್ಷದ ಆಚರಣೆ ವೇಳೆ ಕೊರೊನಾ ಮತ್ತು ಒಮಿಕ್ರಾನ್ ಆತಂಕದ ಹಿನ್ನಲೆಯಲ್ಲಿ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.