Recent Posts

Saturday, September 21, 2024
ದಕ್ಷಿಣ ಕನ್ನಡಸುದ್ದಿ

ಮಂಗಳೂರು ನಗರ ದಕ್ಷಿಣ ಮಂಡಲ ಅಧ್ಯಕ್ಷರಾದ ಶ್ರೀ ವಿಜಯ ಕುಮಾರ್ ಶೆಟ್ಟಿ ಯವರ ಅದ್ಯಕ್ಷತೆಯಲ್ಲಿ ನಡೆದ ಭಾ.ಜ.ಪಾ ಮಂಗಳೂರು ದಕ್ಷಿಣ ಮಂಡಲದ ಕಾರ್ಯ ನಿರ್ವಹಣಾ ಸಭೆ – ಕಹಳೆ ನ್ಯೂಸ್

ಮಂಗಳೂರು : ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ಕಾರ್ಯ ನಿರ್ವಹಣಾ ತಂಡದ ಸಭೆಯು ಡಿ. 25 ರಂದು ಡೊಂಗರಕೇರಿ ಶ್ರೀ ಸುಧೀಂದ್ರ ಸಭಾಭವನದಲ್ಲಿ ಮಂಗಳೂರು ನಗರ ದಕ್ಷಿಣ ಮಂಡಲ ಅಧ್ಯಕ್ಷರಾದ ಶ್ರೀ ವಿಜಯ ಕುಮಾರ್ ಶೆಟ್ಟಿ ಯವರ ಅದ್ಯಕ್ಷತೆಯಲ್ಲಿ ಹಾಗೂ ಮಂಗಳೂರು ದಕ್ಷಿಣ ಶಾಸಕರಾದ ಶ್ರೀ ಡಿ ವೇದವ್ಯಾಸ ಕಾಮತ್ ರವರ ಉಪಸ್ಥಿತಿಯಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು

ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು ‘ಇಂದು ಮಾಜಿ ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವನ್ನು ಸುಶಾಸನ ದಿನವಾಗಿ ಆಚರಿಸಲಾಗುತ್ತಿದ್ದು, ಹಲವಾರು ಉಪಕ್ರಮಗಳ ಮೂಲಕ ವಾಜಪೇಯಿ ಉತ್ತಮ ಆಡಳಿತಕ್ಕೆ ಮುನ್ನುಡಿ ಹಾಡಿದ್ದರು.ಅವರ ದೂರದರ್ಶಿ ರಾಜತಾಂತ್ರಿಕ ಕ್ರಮಗಳು ಕೇವಲ ಅವರ ಕಾಲಕಷ್ಟೇ ಅಲ್ಲದೆ ಇಂದಿನವರೆಗೂ ಸುಶಾಸನಕ್ಕೆ ಬುನಾದಿ ಹಾಕಿ ಕೊಟ್ಟಿದೆ’ ಎಂದರು .

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಮಂಡಲ ಪ್ರಭಾರಿ ಶ್ರೀಮತಿ ಕಸ್ತೂರಿ ಪಂಜ ಅವರು ಪಕ್ಷದ ಸಂಘಟನೆ ಹಾಗೂ ಮುಂದಿನ ಕಾರ್ಯ ಯೋಜನೆ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಜೆ ವಿವಿಧ ಮೋರ್ಚಾಗಳು ಮಂಡಿಸಿದ ವರದಿಗಳನ್ನು ಪಡೆದುಕೊಂಡರು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಂಡಲ ಅಧ್ಯಕ್ಷರಾದ ಶ್ರೀ ವಿಜಯ ಕುಮಾರ್ ಶೆಟ್ಟಿ ಅವರು ಪಕ್ಷವನ್ನು ಬೂತ್ ಮಟ್ಟದಲ್ಲಿ ಸಂಘಟನೆ ಮಾಡಿ ಪಕ್ಷವನ್ನು ಇನ್ನಷ್ಟು ಬಲಿಷ್ಟ ಗೊಳಿಸಲು ಶಕ್ತಿ ಕೇಂದ್ರ ಅಧ್ಯಕ್ಷರು ಸಹಕರಿಸಬೇಕೆಂದು ವಿನಂತಿಸಿದರು ಹಾಗೂ ಇತೀಚೆಗೆ ಸಂಸತ್ತಿನಲ್ಲಿ ಅನುಮೋದನೆಗೊಂಡ ಚುನಾವಣಾ ನಿಯಮಗಳ (ತಿದ್ದುಪಡಿ) ಮಸೂದೆ ಬಗ್ಗೆ ಪ್ರಸ್ತಾವಿಸಿ ಮಸೂದೆ ಪ್ರಕಾರ ಇನ್ನು ಮುಂದೆ ವರ್ಷಕ್ಕೆ ನಾಲ್ಕು ಬಾರಿ ಮತದಾರರ ನೋಂದಣಿಗೆ ಅವಕಾಶ ಮಾಡಲಾಗಿದ್ದು ಪಕ್ಷದ ಕಾರ್ಯಕರ್ತರು ಈ ಬಗ್ಗೆ ಕಾರ್ಯೋನ್ಮುಖರಾಗಬೇಕೆಂದು ಕರೆ ನೀಡಿದರು.

ಮಂಡಲ ಉಪಾಧ್ಯಕ್ಷರು ಹಾಗೂ ಪೂರ್ವ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಶ್ರೀ ಅಜಯ್ ಕುಲಶೇಖರ ಅವರು ಸ್ವಾಗತಿಸಿ, ಮಂಡಲ ಕಾರ್ಯದರ್ಶಿ ಶ್ರೀ ಲಲ್ಲೇಶ್ ಕಾರ್ಯಕ್ರಮ ನಿರೂಪಿಸಿದರು. ಮಂಡಲ ಕಾರ್ಯದರ್ಶಿ ಶ್ರೀಮತಿ ಸುರೇಖಾ ಹೆಗ್ಡೆ ಧನ್ಯವಾದ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಮ ನ ಪಾ ಮಹಾಪೌರರಾದ ಶ್ರೀ ಪ್ರೇಮಾನಂದ ಶೆಟ್ಟಿ , ಮೀನುಗಾರಿಕಾ ನಿಗಮದ ಅಧ್ಯಕ್ಷರಾದ ಶ್ರೀ ನಿತಿನ್ ಕುಮಾರ್, ಮೂಡಾ ಅಧ್ಯಕ್ಷರಾದ ಶ್ರೀ ರವಿಶಂಕರ್ ಮಿಜಾರ್ ಮಂಗಳೂರು ನಗರ ದಕ್ಷಿಣ ಮಂಡಲ ಉಪಾಧ್ಯಕ್ಷರಾದ ಶ್ರೀ ರಮೇಶ್ ಕಂಡೆಟ್ಟು, ಶ್ರೀ ರಮೇಶ್ ಹೆಗ್ಡೆ , ಶ್ರೀ ಕಿರಣ್ ರೈ , ಶ್ರೀ ದೀಪಕ್ ಪೈ , ಮಂಡಲದ ಪದಾಧಿಕಾರಿಗಳು , ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳು ವಿವಿಧ ಮೋರ್ಚಾಗಳ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು, ಪ್ರಕೋಷ್ಠದ ಸಂಚಾಲಕರು ಹಾಗೂ ಸಹ ಸಂಚಾಲಕರು ,ಶಕ್ತಿ ಕೇಂದ್ರದ ಪ್ರಮುಖರು ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.