Recent Posts

Sunday, September 22, 2024
ಸುದ್ದಿ

ಅಕ್ರಮ ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡು ರದ್ದು..! – ಸರ್ಕಾರದ ಬೊಕ್ಕಸ ಸೇರಿದ 249 ಕೋಟಿ – ಕಹಳೆ ನ್ಯೂಸ್

ಸುಳ್ಳು ಮಾಹಿತಿ ನೀಡಿ ಅನರ್ಹರು ಪಡೆದುಕೊಂಡಿದ್ದ 4.13 ಲಕ್ಷ ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡುಗಳನ್ನು ಆಹಾರ ಇಲಾಖೆ ರದ್ದುಪಡಿಸಿದೆ. ಮೂರು ಹೆಕ್ಟೇರ್‌ಗಿಂತ ಹೆಚ್ಚು ಜಮೀನು ಹೊಂದಿದವರು, ಸರ್ಕಾರಿ ನೌಕರರು, ಪಿಂಚಣಿ ಪಡೆಯುತ್ತಿರುವ ನಿವೃತ್ತರು ಹೀಗೆ ಅನೇಕ ಅನರ್ಹರು ಪಡೆದುಕೊಂಡಿದ್ದು, ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುಗಳನ್ನು ರದ್ದು ಮಾಡಲಾಗಿದೆ.


ಮೃತಪಟ್ಟ ಫಲಾನುಭವಿಗಳ ಹೆಸರಿನಲ್ಲಿ ಆಹಾರಧಾನ್ಯ ಪಡೆಯಲಾಗುತ್ತಿತ್ತು. ಇಂತಹವರನ್ನು ಪತ್ತೆಹಚ್ಚಿ ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಪ್ರತಿ ತಿಂಗಳು 82.71 ಲಕ್ಷ ಕೆಜಿ ಅಕ್ಕಿ ಸೋರಿಕೆಗೆ ತಡೆ ಹಾಕಲಾಗಿದೆ. ಇದರಿಂದಾಗಿ ಸರ್ಕಾರಕ್ಕೆ249 ಕೋಟಿ ರೂಪಾಯಿ ಉಳಿತಾಯವಾಗುತ್ತಿದೆ ಎಂದು ತಿಳಿದುಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು