Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರ, ಐಕ್ಯೂಎಸಿ ಘಟಕ ಮತ್ತು ಸ್ನಾತಕೋತ್ತರ ರಸಾಯನ ಶಾಸ್ತ್ರ ವಿಭಾಗಗಳ ಸಹಯೋಗದಲ್ಲಿ ಆಯೋಜಿಸಿದ ಔರಂ(AURUM) ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ಮುಂದಿನ ದಿನ ವಿಜ್ಞಾನಿಗಳಾಗಬೇಕು ಎಂದು ಕೊಂಡವರು ಪಠ್ಯದಿಂದ ಹೊರಗಿನ ವಿಷಯವನ್ನು ಕಲಿಯಬೇಕು. ಯಾವುದಾದರೂ ಕ್ಷೇತ್ರದಲ್ಲಿ ಸಾಧನೆ ಮಾಡಬೇಕೆನ್ನುವ ಹಂಬಲ ವಿದ್ಯಾರ್ಥಿಗಳಲ್ಲಿರಬೇಕು. ಸೃಜನಶೀಲರಾಗಿ ಹಾಗೂ ಕ್ರಿಯಾತ್ಮಕವಾಗಿ ಆಲೋಚಿಸಬೇಕು. ವಿಜ್ಞಾನ ಕ್ಷೇತ್ರದಲ್ಲಿ ಹಲವು ಅವಕಾಶಗಳಿವೆ. ಯಾವುದೇ ಕ್ಷೇತ್ರಕ್ಕೆ ಕಾಲಿಡುವ ಮುನ್ನ ತಾವು ಆಯ್ಕೆ ಮಾಡಿರುವ ಕ್ಷೇತ್ರದ ಬಗ್ಗೆ ಮಾಹಿತಿಯನ್ನು ಪಡೆದುಕೊಂಡಿರಬೇಕು. ಜೊತೆಗೆ ಪೂರ್ವತಯಾರಿಗಳನ್ನು ಮಾಡಿಕೊಳ್ಳಬೇಕು ಎಂದು ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿಯ ಅದ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ಹೇಳಿದರು.


ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರ, ಐಕ್ಯೂಎಸಿ ಘಟಕ ಮತ್ತು ಸ್ನಾತಕೋತ್ತರ ರಸಾಯನ ಶಾಸ್ತ್ರ ವಿಭಾಗಗಳ ಸಹಯೋಗದಲ್ಲಿ ಆಯೋಜಿಸಿದ ರಸಾಯನ ಶಾಸ್ತ್ರ ಸಂಘದ ವಾರ್ಷಿಕ ಚಟುವಟಿಕೆಗಳು ಹಾಗೂ ಔರಂ(AURUM) ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳಲ್ಲಿ ಪ್ರತಿಭೆ ಇದೆ. ಅದನ್ನು ಹೊರತರುವ ಪ್ರಯತ್ನವನ್ನು ಮಾಡಬೇಕಾಗುತ್ತದೆ. ಹೊಸ ವಿಷಯಗಳನ್ನು ಕಲಿಯಬೇಕು ಎನ್ನುವ ತುಡಿತ ವಿದ್ಯಾರ್ಥಿಗಳಲ್ಲಿರಬೇಕು. ಹಾಗಾದಲ್ಲಿ ಮಾತ್ರ ಭವಿಷ್ಯದಲ್ಲಿ ಸಾಧನೆಯನ್ನು ಮಾಡಲು ಸಾಧ್ಯ. ರಸಾಯನ ಶಾಸ್ತ್ರ ಸಂಘದ ಕಾರ್ಯಾರಂಭವಾಗಿರುವುದು ಹೊಸ ವಿಷಯಗಳನ್ನು ಅಧ್ಯಯನ ಮಾಡಲು ವಿದ್ಯಾರ್ಥಿಗಳಿಗೆ ಸಹಕಾರಿಯಾಗುತ್ತದೆ. ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಹಾಗೂ ಇಲ್ಲಿ ನಡೆಯುವ ಕಾರ್ಯಗಳಿಂದ ಸಮಾಜಕ್ಕೆ ಕೊಡುಗೆ ನೀಡುವಂತಿರಬೇಕು ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದ ಅದ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಫ್ರೊ. ವಿಷ್ಣು ಗಣಪತಿ ಭಟ್ ಮಾತನಾಡಿ, ವಿಭಾಗದಿಂದ ಉತ್ತಮ ಕಾರ್ಯಕ್ರಮಗಳು ಮೂಡಿಬರುತ್ತಿದೆ. ರಸಾಯನ ಶಾಸ್ತ್ರವು ಆಸಕ್ತಿಕರ ವಿಷಯವಾಗಿದೆ. ಎಲ್ಲಾ ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಪ್ರೇರೇಪಿಸಬೇಕು. ಇದರಿಂದ ಕಾಲೇಜಿನ ವಿಭಾಗಗಳ ನಡುವೆ ಉತ್ತಮ ಭಾಂದವ್ಯ ಹುಟ್ಟುತ್ತದೆ. ಬೇರೆ ಬೇರೆ ವಿಭಾಗದ ವಿಷಯಗಳನ್ನು ಕಲಿಯುವಲ್ಲಿಯು ವಿದ್ಯಾರ್ಥಿಗಳು ಆಸಕ್ತಿ ತೋರಿಸಬೇಕು. ಪಠ್ಯ ವಿಷಯಗಳಿಂದ ಹೊರತಾದ ವಿಷಯಗಳ ಬಗ್ಗೆ ವಿದ್ಯಾರ್ಥಿಗಳು ಕಲಿಯುವ ಜೊತೆಗೆ ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ವೇದಿಕೆಯಲ್ಲಿ ರಸಾಯನ ಶಾಸ್ತ್ರ ಸಂಘದ ಸಂಯೋಜಕಿ ರಚನಾ ಕುಂದರ್ ಉಪಸ್ಥಿತರಿದ್ದರು. ರಸಾಯನ ಶಾಸ್ತ್ರ ಸಂಘದ ಕಾರ್ಯದರ್ಶಿ ವಿನಿಶಾ ಸ್ವಾಗತಿಸಿ, ಅನ್ನಪೂರ್ಣ ವಂದಿಸಿದರು. ಚೇತನಾ ಕಾರ್ಯಕ್ರಮ ನಿರೂಪಿಸಿದರು.