Sunday, November 24, 2024
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿಸಿರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವಿಶೇಷ ಕಾರ್ಯಕಾರಿಣಿ ಸಭೆ – ಕಹಳೆ ನ್ಯೂಸ್

ಬಂಟ್ವಾಳ: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವಿಶೇಷ ಕಾರ್ಯಕಾರಿಣಿ ಸಭೆ ಬಿಸಿರೋಡು ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಿತು.


ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ‘ಶಕ್ತಿಯನ್ನು ಕಾರ್ಯಕರ್ತರಿಗೆ ಪಕ್ಷ ನೀಡಿದ್ದು, ಶಾಸಕ ಮುಖ್ಯವಲ್ಲ ಪಕ್ಷ ಮುಖ್ಯ’ ಎಂದು ಹೇಳಿದರು. ಎಲ್ಲಾ ಕಾರ್ಯಕರ್ತರು ಕೂಡ ಸಮರ್ಥರಾಗಿದ್ದು ಅವಕಾಶಗಳನ್ನು ಪಕ್ಷ ನೀಡಿದಾಗ ಅತ್ಯಂತ ಯಶಸ್ವಿಯಾಗಿ ನಿಭಾಯಿಸಲು ಅವರು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬಂಟ್ವಾಳ ಕ್ಷೇತ್ರದಲ್ಲಿ ಸಾವಿರ ಕೋಟಿ ರೂಪಾಯಿಗೂ ಮಿಕ್ಕಿದ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಇನ್ನಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆಯಲಿದೆ. ಜಿಲ್ಲೆಯಲ್ಲಿ ಗಲಭೆಯಿಲ್ಲದೆ ಶಾಂತಿಯುತವಾಗಿ ಅಭಿವೃದ್ಧಿಗೆ ಹೆಚ್ಚಿನ ಕೊಡುಗೆ ನೀಡುವ ಕೆಲಸ ಶಾಸಕರುಗಳು ಮಾಡಿದ್ದೇವೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.

 

ಕೃಷಿಕರನ್ನು ಬಲಪಡಿಸುವ ಉದ್ದೇಶದಿಂದ ಬಿಜೆಪಿ ರಾಜ್ಯ, ಕೇಂದ್ರ ಸರಕಾರ ಕೃಷಿಕರಿಗೆ ಹಲವಾರು ಸವಲತ್ತುಗಳನ್ನು ನೀಡಿದೆ. ಅತ್ಯಂತ ಉತ್ತಮ ರೀತಿಯಲ್ಲಿ ಜಗತ್ತು ಮೆಚ್ಚುಗೆ ಗಳಿಸಿದ ರೀತಿಯಲ್ಲಿ ಸರಕಾರ ಕೋವಿಡ್ ನಿಯಂತ್ರಣ ಮಾಡಿದೆ ಎಂಬುದು ಹೆಮ್ಮೆಯ ವಿಚಾರ. ಸರಕಾರ ಯೋಜನೆ ಗಳನ್ನು ಜಾರಿ ಮಾಡುವ ವೇಳೆ ಯೋಚಿಸಿ ಮಾಡುತ್ತಿದ್ದು, ಕಾರ್ಯಕರ್ತರು ತಾಳ್ಮೆಯಿಂದ ವಿಚಾರಗಳನ್ನು ತಿಳಿದುಕೊಳ್ಳುವಂತೆ ತಿಳಿಸಿದರು.

 

ವೇದಿಕೆಯಲ್ಲಿ ಹಿಂದುಳಿದ ಮೋರ್ಚಾದ ರಾಜ್ಯ ಕಾರ್ಯದರ್ಶಿ ವಿಠಲ ಪೂಜಾರಿ, ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಮೀನುಗಾರಿಕೆ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮ್ ದಾಸ ಬಂಟ್ವಾಳ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಬೂಡ ಅಧ್ಯಕ್ಷ ದೇವದಾಸ್ ಬಂಟ್ವಾಳ ಉಪಸ್ಥಿತರಿದ್ದರು.

 

ಶಾಸಕ ರಾಜೇಶ್ ನಾಯ್ಕ್, ಸಂದೇಶ್ ನೀರುಮಾರ್ಗ, ಭಾಗ್ಯಶ್ರೀ ಸಹಿತ ಅನೇಕ ಸಾಧಕರನ್ನು ಈ ವೇದಿಕೆಯಲ್ಲಿ ಗೌರವಿಸಲಾಯಿತು.
ಹಿಂದುಳಿದ ಮೋರ್ಚಾದ ಜಿಲ್ಲಾಧ್ಯಕ್ಷ ಆರ್.ಸಿ.ನಾರಾಯಣ ಪ್ರಾಸ್ತಾವಿಕ ವಾಗಿ ಮಾತನಾಡಿದರು. ದಿನೇಶ್ ರಾಯಿ ಕಾರ್ಯಕ್ರಮ ನಿರೂಪಿಸಿದರು.