Recent Posts

Monday, January 20, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಕ್ತಿತ್ವ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ : ಕ್ರಿಯಾತ್ಮಕ ಯೋಜನೆಗಳಿಂದ ಜೀವನದ ಗುರಿಯನ್ನು ಸಾಧಿಸಬೇಕು- ಡಾ. ಸುದೀಪ್ ಡಿ ಘಾಟೆ – ಕಹಳೆ ನ್ಯೂಸ್

ಪುತ್ತೂರು: ಕ್ರಿಯಾತ್ಮಕವಾಗಿ ಯೋಜನೆಗಳನ್ನು ರೂಪಿಸಿಕೊಂಡು ಅದನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ನಮ್ಮ ಗುರಿಯನ್ನು ಸಾಧಿಸಲು ಸಾಧ್ಯ ಎಂದು ನಿಟ್ಟೆಯ ಕೇಂದ್ರಿಯ ರಿಸರ್ಚ್ ಲ್ಯಾಬ್‍ನ ವಿಜ್ಞಾನಿ ಡಾ. ಸುದೀಪ್ ಡಿ ಘಾಟೆ ಹೇಳಿದರು.

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಇಕೋ ಕ್ಲಬ್‍ನ ವತಿಯಿಂದ ವಿದ್ಯಾರ್ಥಿಗಳಿಗೆ ನಡೆದ ವ್ಯಕ್ತಿತ್ವ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಉತ್ತಮ ವ್ಯಕ್ತಿತ್ವದ ಜೊತೆ ಒಳ್ಳೆಯ ಅಂಕಗಳು ಸಮ್ಮಿಳಿತಗೊಂಡಗ ಯಶಸ್ವಿ ವ್ಯಕ್ತಿ ರೂಪುಗೊಳ್ಳುತ್ತಾನೆ. ತನ್ನ ಗುರಿಯನ್ನು ನಿರ್ಧರಿಸಿಕೊಂಡು ನಾಯಕತ್ವ ಗುಣ ಮನೋದೈಹಿಕ ಸಾಮಥ್ರ್ಯ,ಆತ್ಮವಿಶ್ವಾಸ, ಆತ್ಮಾವಲೋಕನ, ಬದ್ಧತೆ, ದೃಢ ಸಂಕಲ್ಪಗಳನ್ನು ಮೈಗೂಡಿಸಿಕೊಂಡಾಗ ಬದಕು ಸಫಲವಾಗುತ್ತದೆ. ಮಾನವೀಯ ಸಂಬಂಧಗಳಿಗೆ ಮಹತ್ವವನ್ನು ನೀಡಿ ಸತ್ಪಥದಲ್ಲಿ ಸಾಗಬೇಕು.ದೃಢತೆಯ ಕಡೆಗೆ ಗುರಿಯನ್ನು ಇಟ್ಟುಕೊಂಡು ನಡೆದಾಗ ನಮ್ಮ ವಿದ್ಯಾಸಂಸ್ಥೆ ನೀಡಿದ ಶಿಕ್ಷಣ ಸಾರ್ಥಕವಾಗುತ್ತದೆ. ಗೌರವ ನಮ್ಮನ್ನು ಹುಡುಕಿಕೊಂಡು ಬರುವ ರೀತಿಯಲ್ಲಿ ನಾವು ಬೆಳೆಯಬೇಕು. ಜೀವನದಲ್ಲಿ ಗುರಿ ಸ್ಪಷ್ಟವಿದ್ದು ಸರಿದಾರಿಯಲ್ಲಿ ಹೋದಾಗ ಮಾತ್ರ ಬದುಕಿಗೆ ಒಂದು ಅರ್ಥ ಬರುತ್ತದೆ. ನಾವು ಯಾವ ಕೆಲಸವನ್ನು ಮಾಡಿದರೂ ಅದಕ್ಕೆ ಪ್ರಯತ್ನ ಮುಖ್ಯ. ಆಗ ಮಾತ್ರ ಯಶಸ್ಸು ಲಭಿಸುತ್ತದೆ ಎಂದರು. ನಂತರ ಕಲಿಯುವಿಕೆಯ ವಿವಿಧ ಹಂತಗಳನ್ನು ಪರಿಚಯಿಸಿಕೊಟ್ಟರು. ಪಿಯುಸಿ ನಂತರ ವಿಜ್ಞಾನ ವಿಭಾಗದಲ್ಲಿ ಲಭ್ಯವಿರುವ ವಿವಿಧ ಕೋರ್ಸ್ ಗಳು ಹಾಗೂ ಸ್ಫರ್ಧಾತ್ಮಕ ಪರೀಕ್ಷೆಗಳ ಮಾಹಿತಿಯನ್ನು ಈ ಸಂದರ್ಭದಲ್ಲಿ ಒದಗಿಸಿಕೊಟ್ಟರು. ಬಳಿಕ ವಿದ್ಯಾರ್ಥಿಗಳೊಡನೆ ಸಂವಾದ ನಡೆಸಿದರು.

ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ಡಾ. ಮುರಳಿಕೃಷ್ಣ ರೈ ಮಾತನಾಡಿ ವ್ಯಕ್ತಿತ್ವ ಎಂಬುದು ಅನೇಕ ಶಕ್ತಿಗಳ ಸಂಗಮ. ಆದರ್ಶ, ಸದಾಚಾರ, ಶ್ರದ್ಧೆ, ನಿಷ್ಠೆ, ದಕ್ಷತೆ, ಸನ್ನಿವೇಶಗಳೊಡನೆ ಹೊಂದಿಕೊಳ್ಳುವ ಸಾಮಥ್ರ್ಯ, ವೃತ್ತಿಪ್ರಿಯತೆ, ಪರೋಪಕಾರ ಬುದ್ಧಿ, ಪ್ರಾಮಾಣಿಕತೆಗಳು ವ್ಯಕ್ತಿತ್ವ ನಿರ್ಮಿಸುವ ಶಕ್ತಿಗಳು. ಇದರಲ್ಲಿ ಉತ್ತಮ ಸಂಸ್ಕøತಿ – ಸಂಸ್ಕಾರಗಳನ್ನು ಬೆಳೆಸಿಕೊಳ್ಳಬೇಕು. ಬದುಕುವ ಕಲೆಯನ್ನು ರೂಪಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ಉಪಸ್ಥಿತರಿದ್ದರು. ಉಪನ್ಯಾಸಕಿ ಡಾ. ಶ್ರುತಿ ಎಂ.ಎಸ್ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿನಿ ಚೈತನ್ಯ ಕಾರ್ಯಕ್ರಮವನ್ನು ನಿರೂಪಿಸಿದರು. ಉಪನ್ಯಾಸಕಿ ಸುಮಾ ಸ್ವಾಗತಿಸಿ ಅನುಪಮಾ ಶೇಟ್ ವಂದಿಸಿದರು.