Monday, January 20, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ನರೇಂದ್ರ ಪದವಿ ಪೂರ್ವ ಕಾಲೇಜಿಗೆ ರಕ್ಷಕ-ಶಿಕ್ಷಕ ಸಂಘದ ವತಿಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳನ್ನು ಉತ್ತೇಜಿಸಲು ಅಗತ್ಯವಿರುವ ವಸ್ತುಗಳ ಹಸ್ತಾಂತರ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ನರೇಂದ್ರ ಪದವಿ ಪೂರ್ವ ಕಾಲೇಜಿಗೆ ರಕ್ಷಕ-ಶಿಕ್ಷಕ ಸಂಘದ ವತಿಯಿಂದ ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ಮೌಲ್ಯದ ವಸ್ತುಗಳ ಹಸ್ತಾಂತರ ಕಾರ್ಯಕ್ರಮ ಕಾಲೇಜಿನ ಪ್ರಗತಿಗಾಗಿ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳನ್ನು ಉತ್ತೇಜಿಸಲು ಅಗತ್ಯವಿರುವ ಸುಮಾರು ಒಂದು ಲಕ್ಷ ಮೌಲ್ಯದ ಝೆರಾಕ್ಸ್ ಮೆಷಿನ್ ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕುಡಿಯುವ ನೀರಿನ ಶುದ್ದೀಕರಣದ ಎರಡು ಘಟಕಗಳು ವಾಟರ್ ಪ್ಯೂರಿಫಯರ್ ಗಳನ್ನು ಕೊಡುಗೆಯಾಗಿ ನೀಡಿದರು.ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಜೊತೆ ಕಾರ್ಯದರ್ಶಿಯಾದ ಶ್ರೀಮತಿ ರೂಪಲೇಖ, ಕಾಲೇಜಿನ ಆಡಳಿತ ಅಧ್ಯಕ್ಷರಾದ ಶ್ರೀಕಾಂತ ಕೊಳತ್ತಾಯ, ಸಂಚಾಲಕರಾದ ಸಂತೋಷ ಬಿ. , ಸದಸ್ಯರಾದ ಸೂರ್ಯನಾಥ ಆಳ್ವ, ಕೇಶವ ಮೂರ್ತಿ ಡಿ., ಶ್ರೀಮತಿ ಮೋಹಿನಿ ದಿವಾಕರ, ಸಂಪತ್ ಕುಮಾರ್, ರಕ್ಷಕ- ಶಿಕ್ಷಕ ಸಂಘದ ಅಧ್ಯಕ್ಷರಾದ ಕೃಷ್ಣಪ್ಪ ಗೌಡ, ಉಪಾಧ್ಯಕ್ಷರಾದ ದಿವಾಕರ ಬಲ್ಲಾಳ ಮತ್ತು ಎಲ್ಲಾ ಸದಸ್ಯರು, ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಎಲ್ಲಾ ಪೋಷಕರು, ಉಪನ್ಯಾಸಕರು ,ಸಿಬ್ಬಂದಿಗಳು ಮತ್ತು ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು