Monday, January 20, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳದಲ್ಲಿ ಕೋವಿಡ್‍ನಿಂದ ಮೃತಪಟ್ಟ 62 ಮಂದಿಯ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಣೆ : ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು –ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೋವಿಡ್‍ನಿಂದ ಮೃತಪಟ್ಟ ಒಟ್ಟು 62 ಮಂದಿಯ ಕುಟುಂಬಕ್ಕೆ ಸರಕಾರದಿಂದ ಬಿಡುಗಡೆಯಾಗ ನೆರವಿನ ಚೆಕ್‍ನ್ನ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹಸ್ತಾಂತರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಚೆಕ್ ನೀಡಿದ ಬಳಿಕ ಮಾತನಾಡಿದ ಶಾಸಕರು ಸರಕಾರದಿಂದ ಸಣ್ಣ ಮಟ್ಟಿನ ನೆರವು ನೀಡುವ ಕಾರ್ಯ ಮಾಡಲಾಗಿದೆ ಎಂದ್ರು ಇನ್ನು ಇದೇ ವೇಳೆ ಮೃತರ ಕುಟುಂಬಕ್ಕೆ ಸಾಂತ್ವನ ನೀಡಿದರು. ಹಕ್ಕುಪತ್ರ ವಿತರಣೆ ಸಣ್ಣಪುಟ್ಟ ಗೊಂದಲ ನಿವಾರಣೆ ಮಾಡಿ ನಿನ್ನೆ 15 ಮಂದಿಗೆ ಹಕ್ಕು ಪತ್ರ ನೀಡಲಾಯಿತು.
ವೇದಿಕೆಯಲ್ಲಿ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಪಿಲಾತಬೆಟ್ಟು ಗ್ರಾ.ಪಂ.ಅಧ್ಯಕ್ಷೆ ಹರ್ಷಿಣಿ ಪುಷ್ಪಾನಂದ, ಗೋಳ್ತಮಜಲು ಗ್ರಾ.ಪಂ.ಅಧ್ಯಕ್ಷ ಅಭಿಷೇಕ್ ಶೆಟ್ಟಿ, ಅನಂತಾಡಿ ಗ್ರಾ.ಪಂ.ಅಧ್ಯಕ್ಷ ಗಣೇಶ್ ಪೂಜಾರಿ, ಅಮ್ಮುಂಜೆ ಗ್ರಾ.ಪಂ.ಅಧ್ಯಕ್ಷ ವಾಮನ ಅಚಾರ್ಯ, ಕುಕ್ಕಿಪಾಡಿ ಗ್ರಾ.ಪಂ.ಅಧ್ಯಕ್ಷೆ ಸುಜಾತ ಆರ್. ಪೂಜಾರಿ, ಕಾವಳಮೂಡೂರು ಗ್ರಾ.ಪಂ. ಉಪಾಧ್ಯಕ್ಷ ಅಜಿತ್ ಶೆಟ್ಟಿ, ಉಪತಹಶೀಲ್ದಾರ್ ನರೇಂದ್ರನಾಥ ಭಟ್ ಮಿತ್ತೂರು, ಕಂದಾಯ ನಿರೀಕ್ಷಕರಾದ ಕುಮಾರ್ ಟಿ.ಸಿ, ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.