Recent Posts

Sunday, January 19, 2025
ದಕ್ಷಿಣ ಕನ್ನಡಸುದ್ದಿ

ಮಂಗಳೂರು ಮಹಾನಗರ ಪಾಲಿಕೆಯ ನಿರ್ಮಾಣ ಹಂತದಲ್ಲಿರುವ ಕದ್ರಿ ಮತ್ತು ಕಂಕನಾಡಿ ಮಾರುಕಟ್ಟೆಗೆ ಶಾಸಕ ವೇದವ್ಯಾಸ್ ಕಾಮತ್ ಭೇಟಿ, ಪರಿಶೀಲನೆ –ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ನಿರ್ಮಾಣ ಹಂತದಲ್ಲಿರುವ ಕದ್ರಿ ಮತ್ತು ಕಂಕನಾಡಿ ಮಾರುಕಟ್ಟೆಗೆ ಶಾಸಕ ವೇದವ್ಯಾಸ್ ಕಾಮತ್ ಮತ್ತು ಮೇಯರ್ ಪ್ರೇಮಾನಂದ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಈ ವೇಳೆ ಮಾತನಾಡಿದ ಶಾಸಕ ಕಾಮತ್, ಮಾರುಕಟ್ಟೆಗಳ ಕಾಮಗಾರಿ ಸಮರೋಪಾದಿಯಲ್ಲಿ ಸಾಗುತ್ತಿದೆ. ಈ ಹಿಂದೆ ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಗಳೊಂದಿಗೆ ಚರ್ಚೆ ನಡೆಸಿದ್ದು ಸಣ್ಣಪುಟ್ಟ ಬದಲಾವಣೆಗಳೊಂದಿಗೆ ಅತೀ ಶೀಘ್ರದಲ್ಲೇ ಮಾರುಕಟ್ಟೆಯನ್ನು ಸಾರ್ವಜನಿಕರ ಉಪಯೋಗಕ್ಕೆ ಬಿಟ್ಟುಕೊಡಲಾಗುವುದು ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಂಕನಾಡಿ ಮಾರುಕಟ್ಟೆಯ ಹಳೆಯ ವ್ಯಾಪಾರಿಗಳಿಗೆ ತಾತ್ಕಾಲಿಕವಾಗಿ ಮಾರುಕಟ್ಟೆಯ ಕೆಳ ಅಂತಸ್ಥಿನಲ್ಲಿ ವ್ಯಾಪಾರ ಮಾಡಲು ಅವಕಾಶಕಲ್ಪಿಸಲಾಗಿದೆ. ಕದ್ರಿ ಮತ್ತು ಕಂಕನಾಡಿ ಮಾರುಕಟ್ಟೆ ನಿರ್ಮಾಣದಿಂದಾಗಿ ಈ ನಗರದ ವ್ಯಾಪಾರ ಕೇಂದ್ರಗಳಿಗೆ ಮಹತ್ವ ಬಂದಾಂತಾಗುತ್ತದೆ. ಮಾರುಕಟ್ಟೆಯ ನಿರ್ಮಾಣಕ್ಕೆ ವ್ಯಾಪಾರಿಗಳೂ ಕೂಡ ಸಹಕಾರ ನೀಡುತ್ತಿದ್ದು ಶೀಘ್ರವಾಗಿ ಕೆಲಸ ಪೂರ್ಣಗೊಳಿಸಲಾಗುವುದು ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್, ಪಾಲಿಕೆ ಸದಸ್ಯರಾದ ಕದ್ರಿ ಮನೋಹರ ಶೆಟ್ಟಿ, ನವೀನ್ ಡಿಸೋಜ, ಕಾವ್ಯಾ ನಟರಾಜ್ ಆಳ್ವ, ಭಾನುಮತಿ, ಪಾಲಿಕೆಯ ಅಧಿಕಾರಿಗಳು, ಗುತ್ತಿಗೆದಾರರು, ವ್ಯಾಪಾರಿಗಳು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.