Sunday, November 24, 2024
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಾಣಿ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮೀಣ ಬಡತನ ನಿವಾರಣಾ ಯೋಜನೆ, ಮಿಷನ್ ಅಂತ್ಯೋದಯ ಮತ್ತು ಜನರ ಯೋಜನೆ ಜನರ ಅಭಿವೃದ್ಧಿ ಮುಖಾಮುಖಿ ತರಬೇತಿ ಕಾರ್ಯಕ್ರಮ – ಕಹಳೆ ನ್ಯೂಸ್

ಮಾಣಿ: ಪಂಚಾಯತ್ ರಾಜ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಅಬ್ದುಲ್ ನಝೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದ.ಕ ಜಿಲ್ಲಾ ಪಂಚಾಯತ್, ಬಂಟ್ವಾಳ ತಾಲೂಕು ಪಂಚಾಯತ್ ಇವರ ಸಹಯೋಗದೊಂದಿಗೆ, ಮಾಣಿ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮೀಣ ಬಡತನ ನಿವಾರಣಾ ಯೋಜನೆ, ಮಿಷನ್ ಅಂತ್ಯೋದಯ ಮತ್ತು ಜನರ ಯೋಜನೆ ಜನರ ಅಭಿವೃದ್ಧಿ ಮುಖಾಮುಖಿ ತರಬೇತಿ ಕಾರ್ಯಕ್ರಮ ಮಾಣಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಿತು.

ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ತರಬೇತಿ ಎನ್ನುವುದು ನಿಂತ ನೀರಲ್ಲ, ಅದು ಹರಿಯುತ್ತಿರುವ ನೀರು. ತರಬೇತಿಯಲ್ಲಿ ಸಿಗುವ ಅತೀ ಅಮೂಲ್ಯವಾದ ವಿಚಾರಗಳನ್ನು ಜೀವನದಲ್ಲಿ ಅಳವಡಿಸುವ ಮೂಲಕ ಗ್ರಾಮದ ಅಭಿವೃದ್ಧಿಗಾಗಿ ಶ್ರಮಿಸಬೇಕು ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ತರಬೇತುದಾರ ಉಮಾನಾಥ ಶೆಟ್ಟಿ ಪೆರ್ನೆಯವರು, ಮೂಲಭೂತ ಸೌಕರ್ಯಗಳನ್ನು ಪಡೆಯುವ ಮತ್ತು ಉಳಿಸಿ ಬೆಳೆಸಿಕೊಳ್ಳುವ ಜವಾಬ್ದಾರಿ ಜನಪ್ರತಿನಿಧಿಗಳ ಜೊತೆಗೆ ಸಾರ್ವಜನಿಕರಿಗೂ ಇದೆ. ಪಂಚಾಯತ್ ಆಡಳಿತದೊಂದಿಗೆ ಎಲ್ಲರೂ ಕೈಜೋಡಿಸಬೇಕು ಎಂದರು.

ವಿವಿಧ ಸ್ತ್ರೀಶಕ್ತಿ ಸಂಘಟನೆಗಳ ಸದಸ್ಯರಿಗೆ ತರಬೇತಿ ನಡೆಯಿತು. ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರುಗಳಾದ ಮೆಲ್ವಿನ್ ಕಿಶೋರ್ ಮಾರ್ಟಿಸ್, ರಮಣಿ.ಡಿ.ಪೂಜಾರಿ, ನಾರಾಯಣ ಶೆಟ್ಟಿ, ಮಿತ್ರಾಕ್ಷಿ ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಗಿರಿಜಾ ಸ್ವಾಗತಿಸಿದರು. ಪಂಚಾಯತ್ ಸಿಬ್ಬಂದಿ ಸಹಕರಿಸಿದರು.