Recent Posts

Saturday, September 21, 2024
ದಕ್ಷಿಣ ಕನ್ನಡಸುದ್ದಿ

ಮಂಗಳೂರು ಉತ್ತರದ 15/18 ವಯೋಮಿತಿ ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆ ನೀಡಿಕೆಗೆ ಶಾಸಕ ಡಾ.ವೈ ಭರತ್ ಶೆಟ್ಟಿಯವರಿಂದ ಚಾಲನೆ- ಕಹಳೆ ನ್ಯೂಸ್

ದ.ಕ ಜಿಲ್ಲಾಡಳಿತೆ ಜಿಲ್ಲಾ ಪಂಚಾಯಿತಿ ಆರೋಗ್ಯ ಇಲಾಖೆ ಮತ್ತು ಕಾಟಿಪಳ್ಳ ಬ್ರಹ್ಮಶ್ರಿ ನಾರಾಯಣ ಗುರು ಶಿಕ್ಷಣ ಸಂಸ್ಥೆ ಆಶ್ರಯದಲ್ಲಿ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಮಂಗಳೂರು ಉತ್ತರದ 15/18 ವರ್ಷ ವಯೋಮಿತಿಯ ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆ ನೀಡಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಬಳಿಕ ಮಾತನಾಡಿದ ಶಾಸಕ ಡಾ. ವೈ ಭರತ್ ಶೆಟ್ಟಿಯವರು ಮಕ್ಕಳ ಆರೋಗ್ಯ ರಕ್ಷಣೆ ಬಗ್ಗೆ ಪೋಷಕರು ನಿಗಾ ವಹಿಸಬೇಕು ಈ ನಿಟ್ಟಿನಲ್ಲಿ ಪೂರಕವಾಗಿ ಸ್ಪಂದಿಸಲು ಸರಕಾರ ಸಿದ್ದ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬ್ರಹ್ಮಶ್ರಿ ನಾರಾಯಣ ಗುರು ಶಿಕ್ಷಣ ಸಂಸ್ಥೆ ಅಧ್ಯಕ್ಷ ದಯಾಕರ್ ಪಿ. ಸಂಚಾಲಕ ಅರುಣ್ ಕುಮಾರ್ ಪಿ., ಸುರತ್ಕಲ್ ವಲಯ ವೈದ್ಯಾಧಿಕಾರಿ ಡಾ. ಸೌಜನ್ಯ, ಪಾಲಿಕೆ ಸದಸ್ಯರಾದ ಲೋಕೇಶ್ ಬೊಳ್ಲಾಜೆ, ವರುಣ್ ಚೌಟ, ಶಾಲೆಯ ಮುಖ್ಯಸ್ತೆ ಪುಷ್ಪಲತ ರಾವ್, ಮಹಾವೀರ ಜೈನ್, ಶೈಲಜಾ, ಆಂಗ್ಲ ಮಾಧ್ಯಮ ಶಾಲೆ ಮುಖ್ಯಸ್ಥೆ ಗುಣವತಿ ರಮೇಶ್, ಕಾಲೇಜಿನ ಪ್ರಾಂಶುಪಾಲ ಉಮೇಶ್ ಕರ್ಕೇರ, ಬಿಜೆಪಿ ಪ್ರಮುಖರಾದ ಭರತ್ ರಾಜ್ ಕೃಷ್ಣಾಪುರ, ಹೊನ್ನಯ್ಯ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಶಾಲೆಯ ಸುಮಾರು 200ಕ್ಕೂ ಮಿಕ್ಕಿದ ಮಕ್ಕಳಿಗೆ ಲಸಿಕೆ ನೀಡಲಾಯಿತು. ಪ್ರಮೀಳಾ ಕಾರ್ಯಕ್ರಮ ನಿರೂಪಿಸಿದರು

ಜಾಹೀರಾತು