Monday, January 20, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿಟ್ಲದಲ್ಲಿ ಪ್ರಧಾನಮಂತ್ರಿ ಉಜ್ವಲ-2 ಯೋಜನೆಯಡಿ ಉಚಿತ ಗ್ಯಾಸ್ ವಿತರಣೆ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿಟ್ಲದಲ್ಲಿ ಪ್ರಧಾನಮಂತ್ರಿ ಉಜ್ವಲ-2 ಯೋಜನೆಯಡಿ ಉಚಿತ ಗ್ಯಾಸ್ ವಿತರಣೆಯನ್ನು ಮಾಡಲಾಯಿತು.


ಬಳಿಕ ಮಾತನಾಡಿದ ಶಾಸಕರು ಪ್ರಧಾನಿ ನರೇಂದ್ರ ಮೋದಿಯವರ ಕೇಂದ್ರ ಸರ್ಕಾರವು ಜನಪರ ಯೋಜನೆಗಳನ್ನು ರೂಪಿಸುವ ಮೂಲಕ ಜನಪ್ರಿಯತೆಯನ್ನು ಗಳಿಸಿಕೊಂಡಿದ್ದು, ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ವಿತರಣೆಯನ್ನು ಮಾಡಿ ಮಹಿಳೆಯರು ಆರೋಗ್ಯಕರ ಜೀವನವನ್ನು ನಡೆಸಲು ಸಹಕಾರಿಯಾಗುವಂತಹ ಸೌಕರ್ಯಗಳನ್ನು ಕಲ್ಪಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಹೊಸ ಯೋಚನೆ, ಹೊಸ ಯೋಜನೆಗಳ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ತಲುಪುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಶ್ರಮಿಸುತ್ತಿದೆ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವ ಮೂಲಕ ತಮ್ಮ ಜೀವನ ಮಟ್ಟವನ್ನು ಸುಧಾರಿಸಿಕೊಳ್ಳುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಪುತ್ತೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮಾಜಿ ಅಧ್ಯಕ್ಷರಾದ ಶ್ರೀ ಬುಡಿಯಾರ್ ರಾಧಾಕೃಷ್ಣ ರೈ, ಪುತ್ತೂರು ತಾಲೂಕು ಪಂಚಾಯತ್ ಸಾಮಾಜಿಕ ನ್ಯಾಯ ಸಮಿತಿಯ ಮಾಜಿ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ, ಗ್ಯಾಸ್ ವಿತರಕರು ಉಪಸ್ಥಿತರಿದ್ದರು.