Monday, January 20, 2025
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಆಹ್ವಾನ – ಕಹಳೆ ನ್ಯೂಸ್

ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದಲ್ಲಿ ಜ. 17 ರಿಂದ ಜ.26 ರವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವ ಸಮಾರಂಭದ ಆಮಂತ್ರಣವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜಶ್ರೀ ಡಿ . ವೀರೇಂದ್ರ ಹೆಗ್ಗಡೆಯವರಿಗೆ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ. ಕೇಶವ ಆಚಾರ್ಯ ನೀಡಿದರು .

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಕ್ಷೇತ್ರದ 3ನೇ ಮೊಕ್ತೇಸರ್ ಶ್ರೀ ಲೋಕೇಶ್ ಆಚಾರ್ಯ ಬಿಜೈ, ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಲೋಕೇಶ್ ಆಚಾರ್ಯ ಪುಂಜಾಲಕಟ್ಟೆ, ಆಡಳಿತ ಮಂಡಳಿಯ ಸದಸ್ಯರಾದ ದಾಮೋದರ ಆಚಾರ್ಯ ಬಿಕರ್ನಕಟ್ಟೆ, ಪುರುಷೋತ್ತಮ ಆಚಾರ್ಯ ಪುತ್ತೂರು, ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷ ಅರುಣ್ ಕದ್ರಿ ಕಂಬಳ, ಜೀರ್ಣೋದ್ಧಾರ ಸಮಿತಿಯ ಸದಸ್ಯ ಶೇಖರ್ ಆಚಾರ್ಯ, ಬಿ. ಕೆ. ಸತೀಶ್ ಆಚಾರ್ಯ ಬೆಳ್ತಂಗಡಿ, ಸುರೇಶ್ ಧರ್ಮಸ್ಥಳ, ಮುಂತಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು