Sunday, November 24, 2024
ದಕ್ಷಿಣ ಕನ್ನಡಪುತ್ತೂರುಸುದ್ದಿ

ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕರ ಮಹಾಸಭೆ- ಕಹಳೆ ನ್ಯೂಸ್

ಪುತ್ತೂರು: ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪೋಷಕರ ಮಹಾಸಭೆಯಲ್ಲಿ ಮಾತನಾಡಿದ ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಕೃಷ್ಣಪ್ಪ ಗೌಡ ಅವರು “ಮಕ್ಕಳ ಉತ್ತಮ ಭವಿಷ್ಯವನ್ನು ಮತ್ತು ಸಕರಾತ್ಮಕ ವ್ಯಕ್ತಿತ್ವವನ್ನು ರೂಪುಗೊಳಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿರುತ್ತದೆ. ಜೊತೆಗೆ ವಿದ್ಯಾರ್ಥಿಯ ಸಾಧನೆಗೆ ಪೂರಕವಾದ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯಲ್ಲಿ ಪೋಷಕರೊಂದಿಗಿನ ಒಡನಾಟ ಹೆಚ್ಚಿನ ಪ್ರಭಾವ ಬೀರುತ್ತದೆ. ಒಬ್ಬ ವಿದ್ಯಾರ್ಥಿಗೆ ಬೇಕಾದ ಯೋಚನಾ ಶಕ್ತಿ ,ಸಮಾಜದಲ್ಲಿ ಬದುಕಲು ಬೇಕಾಗುವ ಕೌಶಲ್ಯಗಳನ್ನು ಗಳಿಸಿಕೊಳ್ಳುವಲ್ಲಿ ಪೋಷಕರ ಪಾತ್ರ ಅಪಾರವಾದುದು.” ಎಂದು ಹೇಳಿದರು.

ವೇದಿಕೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷರಾದ ದಿವಾಕರ ಬಲ್ಲಾಳ ಮತ್ತು ಶ್ರೀಮತಿ ಸುರೇಖ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಸ್ವಾಗತಿಸಿ, ಬಳಿಕ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಪೋಷಕರ ಕರ್ತವ್ಯ ಮತ್ತು ಜವಾಬ್ದಾರಿಗಳ ಬಗ್ಗೆ ತಿಳಿಸಿದರು. ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆಯನ್ನು ಕೊಡಿಸುವುದರ ಬಗ್ಗೆ ಮಾಹಿತಿಯನ್ನು ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಉಪನ್ಯಾಸಕರಾದ ಶ್ರೀಮತಿ ನಾಗಶ್ರೀ ವಂದಿಸಿ, ಶ್ರೀಮತಿ ಶಶಿಕಲಾ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು