Monday, January 20, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿದ್ಯುತ್ ವೈರ್ ಕುತ್ತಿಗೆಗೆ ಸಿಲುಕಿ ದ್ವಿಚಕ್ರ ಸವಾರ ಮೃತ್ಯು- ಕಹಳೆ ನ್ಯೂಸ್

ಪುತ್ತೂರು : ತುಂಡಾಗಿ ಬಿದಿದ್ದ ವಿದ್ಯುತ್ ತಂತಿ ಬೈಕ್ ಸವಾರನ ಕುತ್ತಿಗೆಗೆ ಸಿಲುಕಿದ ಪರಿಣಾಮ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಧಾರುಣವಾಗಿ ಸಾವನಪ್ಪಿರುವ ಘಟನೆ ಕಾಜೂರು ದಿಡುಪೆ ಸಂಸೆ ರಸ್ತೆಯ ಹೇಡ್ಯ ಸೊಸೈಟಿ ಬಳಿ ತಡರಾತ್ರಿ ನಡೆದಿದೆ.


ಮೃತರನ್ನು ಕೊಯ್ಯುರು ನಿವಾಸಿ ರಘು ಎಂದು ಗುರುತಿಸಲಾಗಿದ್ದು, ಹೇಡ್ಯ ಸೊಸೈಟಿ ಬಳಿ ರಾತ್ರಿ ಸಂದರ್ಭ ಹುಲ್ಲು ಸಾಗಾಟದ ಪಿಕಪ್ ವಾಹನ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿತ್ತು, ಇದರಿಂದಾಗಿ ನಾಲ್ಕೈದು ವಿದ್ಯುತ್ ಕಂಬಗಳು ರಸ್ತೆಗೆ ಬಿದ್ದಿದ್ದು, ಅದರ ತಂತಿಗಳು ರಸ್ತೆಯಲ್ಲಿ ನೇತಾಡುತ್ತಿದ್ದವು, ರಘು ಅವರು ರಾತ್ರಿ 11 ಗಂಟೆ ವೇಳೆಗೆ ಬೈಕ್ ನಲ್ಲಿ ಹೇಡ್ಯ ಸೊಸೈಟಿ ಬಳಿ ಸಂಚರಿಸುತ್ತಿದ್ದ ಸಂದರ್ಭ ಅವರ ಕುತ್ತಿಗೆಗೆ ತಂತಿಗಳು ಸಿಕ್ಕಿಕೊಂಡು ರಸ್ತೆಗೆಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು