Recent Posts

Monday, January 20, 2025
ದಕ್ಷಿಣ ಕನ್ನಡಸುದ್ದಿ

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿ ಅರೆಸ್ಟ್- ಕಹಳೆ ನ್ಯೂಸ್

ಮಂಗಳೂರು : ಯುವಕನೊಬ್ಬ 10 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಆರೋಪಿಯನ್ನು ಉರ್ವ ಪೊಲೀಸರು ಬಂಧಿಸಿದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ.

ಬಂಧಿತ ಆರೋಪಿ ನಿತೇಶ್ ರಿತಿನ್ ಯಾನೆ ನಿತಿನ್ (19) ಎಂದು ತಿಳಿದು ಬಂದಿದ್ದು, ಡಿ.24 ರಂದು ನೆರೆಮನೆಯ ಬಾಲಕಿಯೊಬ್ಬಳು ಶಾಲೆ ಮುಗಿಸಿ ನಂತರ ಆರೋಪಿಯ ಮನೆಗೆ ಟಿವಿ ನೋಡಲು ಬಂದಿದ್ದ ಸಂದರ್ಭದಲ್ಲಿ ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದನಂತೆ. ಭಯಗೊಂಡ ಬಾಲಕಿ ಅಲ್ಲಿಂದ ತನ್ನ ಮನೆಗೆ ಓಡಿ ಹೋಗಿದ್ದಳು. ಈ ವೇಳೆ, ಅಲ್ಲಿಗೂ ಹೋದ ಆರೋಪಿ  ಈ ವಿಷಯ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವ ಬೆದರಿಕೆಯೊಡ್ಡಿದ್ದಾನೆ ಎಂದು ಆರೋಪಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಗ್ಗೆ ಬಾಲಕಿಯ ತಂದೆ ಉರ್ವ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು